ಸಾಲುಮರದ ತಿಮ್ಮಕ್ಕ ನಗರಕ್ಕೆ ಭೇಟಿ

Salu Marada Timmakka
Published on

ಹುಬ್ಬಳ್ಳಿ : ವೃಕ್ಷಮಾತೆ ನಾಡೋಜ, ಪದಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಆ.29 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕಾಗಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ಸಂತೋಷ ನಗರ ಜೆ.ಕೆ. ಸ್ಕೂಲ್ ಬಳಿ ವಸುಂಧರಾ ೌಂಡೇಶನ್‌ನಿಂದ 150 ಸಸಿಗಳನ್ನು ನೆಟ್ಟು ಪೋಷಿಸುತ್ತಿರುವ ಸ್ಥಳಕ್ಕೆ ಅಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ.
ಎಪಿಎಂಸಿಯಲ್ಲಿರುವ ಶಿವಲಿಂಗಮ್ಮ ಶಂಕರಗೌಡ ಬಾಳನಗೌಡ್ರ ಹಿರಿಯ ಪ್ರಾಥಮಿಕ ಶಾಲೆಗೆ 11 ಗಂಟೆಗೆ ಭೇಟಿ ನೀಡಿ, ಅಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ಧಾರೂಢಸ್ವಾಮಿ ಮಠಕ್ಕೆ ತೆರಳಿ, ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net