ಸಾವಿತ್ರಿಬಾಯಿ ಫುಲೆ ಮಹಿಳೆಯರಿಗೆ ಪ್ರೇರಣೆ

10 MANJU 06
Published on

ಹೊಸಪೇಟೆ: ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಶೋಷಿತರ, ಅಸಹಾಯಕರ, ಅಸ್ಪಶ್ಯ ಮಹಿಳೆಯರಿಗಾಗಿ ಶಿಕ್ಷಣ ಸಂಸ್ಥೆ ಆರಂಭಿಸಿ ಅಪರೂಪದ ಸೇವೆ ಮಾಡಿದರು ಎಂದು ಕನ್ನಡ ವಿವಿ ಅಧ್ಯಯನಾಂಗದ ನಿರ್ದೇಶಕ ಡಾ.ಅಮರೇಶ ಯತಗಲ್ ತಿಳಿಸಿದರು.

ಕನ್ನಡ ವಿವಿಯ ಸಂಗೀತ ಮತ್ತು ನೃತ್ಯ ವಿಭಾಗದಿಂದ ಪಂಪ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿನಿಯರಿಗೆ ಸಾವಿತ್ರಿಬಾಯಿ ಫುಲೆ ಮಾದರಿಯಾಗಿದ್ದಾರೆ ಎಂದರು.

ಕುಲಪತಿ ಡಾ.ಡಿ.ವಿ ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ದಿನಾಚರಣೆ ನೆಪದಲ್ಲಿ ಮಹಿಳಾ ಹೋರಾಟಗಾರ್ತಿ, ಹೆಣ್ಣುಮಕ್ಕಳ ಶಿಕ್ಷಣ ಹಾಗೂ ಅವರ ಹಕ್ಕುಗಳಿಗೆ ಹೋರಾಡಿದ ಸಾಧಕಿಯನ್ನು ಸ್ಮರಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ಬಹುದೊಡ್ಡ ಗೌರವ ಎಂದರು.

ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಮಾತನಾಡಿ, ಶೈಕ್ಷಣಿಕ ಕ್ರಾಂತಿ, ಬಾಲ್ಯವಿವಾಹ ತಡೆ, ವಿಧವೆಯರ ಪುನರ್ವಿವಾಹ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಸಾವಿತ್ರಿಬಾಯಿ ಫುಲೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದರು.

ಎಂ.ಎ ಕನ್ನಡ ಸಾಹಿತ್ಯ ವಿಭಾಗದ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿ ತಿಪ್ಪೇಸ್ವಾಮಿ ನಾಯ್ಕ ರಚಿಸಿದ ‘ಪೇಪರ್’ ನಾಟಕ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net