ಸಾವಿರ ಎಕರೆಯಲ್ಲಿ ಬೆಳೆ ಹಾನಿ

oplus_1179648
ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದ ವ್ಯಾಪ್ತಿಯಲ್ಲಿ ಮಳೆಯಿಂದ ಬೆಳೆ ಹಾನಿಗೊಳಗಾದ ಹೊಲಗಳಿಗೆ ಶಾಸಕ ಸರಣು ಸಲಗರ ಭೇಟಿ ನೀಡಿ ವೀಕ್ಷಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್., ಸಹಾಯಕ ನಿರ್ದೇಶಕ ಗೌತಮ ಇತರರಿದ್ದರು.
Published on

ಬಸವಕಲ್ಯಾಣ: ಕೋಹಿನೂರ ಹೋಬಳಿಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ನಾಲಾದಿಂದ ಹೊಲಗಳಿಗೆ ನೀರು ನುಗ್ಗಿ ಸುಮಾರು ಒಂದು ಸಾವಿರ ಎಕರೆಯಲ್ಲಿಯ ಬೆಳೆ ಹಾನಿಯಾಗಿದೆ. ಈ ಕುರಿತು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು ಎಂದು ಶಾಸಕ ಶರಣು ಸಲಗರ ಸೂಚಿಸಿದರು.

ಮಳೆಯಿಂದ ಬೆಳೆ ಹಾನಿಗೊಳಗಾದ ಹೊಲಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶಾಸಕರು, ಸೋಮವಾರ ರಾತ್ರಿ ಕೋಹಿನೂರು ಹೋಬಳಿ ವ್ಯಾಪ್ತಿಯಲ್ಲಿ (೫೬ ಎಂಎಂ) ಮಳೆಯಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಬೆಳೆ ಹಾನಿಗೆ ಸರ್ಕಾರದಿಂದ ರೈತರಿಗೆ ಪರಿಹಾರ ಕಲ್ಪಿಸಬೇಕು. ಈ ಕುರಿತು ವಿಧಾನ ಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಕೋಹಿನೂರು, ಕೋಹಿನೂರ ವಾಡಿ, ಲಾಡವಂತಿ, ಲಾಡವಂತಿವಾಡಿ, ಬಟಗೇರಾ, ಬಟಗೇರಾವಾಡಿ, ರಾಮತೀರ್ಥ (ಡಿ) ಗ್ರಾಮಗಳ ವ್ಯಾಪ್ತಿಯಲ್ಲಿ ಹೊಲಗಳಿಗೆ ಭೇಟಿ ನೀಡಿದ ಶಾಸಕರು, ಹೊಲಗಳಿಗೆ ನೀರು ನುಗ್ಗಿ ಹಲವೆಡೆ ಫಲವತ್ತಾದ ಮಣ್ಣು ಸಮೇತ ಬೆಳೆ ಕೊಚ್ಚಿಕೊಂಡು ಹೋಗಿದೆ. ಇನ್ನು ಕೆಲ ಹೊಲಗಳಲ್ಲಿ ಕಲ್ಲುಗಳು ತುಂಬಿಕೊಂಡಿವೆ. ೩೦-ರಿಂದ ೪೦ ಕಡೆ ಹೊಲ-ತೋಟಗಳಲ್ಲಿ ಬಾವಿಯಲ್ಲಿ ಮಣ್ಣು ತುಂಬಿಕೊಂಡು ನೆಲಸಮವಾಗಿವೆ.ಇಲ್ಲಿಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಮಳೆಯಿಂದಾಗಿ ಈ ಭಾಗದ ೫ ಸೇತುವೆಗಳಗೆ ಹಾನಿಯಾಗಿದೆ. ಹಲವೆಡೆ ರಸ್ತೆ ಕೆಟ್ಟು ಹೋಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಕೆಕೆಆರ್‌ಡಿಬಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು.

ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಸಹಾಯಕ ನಿರ್ದೇಶಕ ಗೌತಮ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ವೈಜಂತಾ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜಕುಮಾರ ಸಿರಗಾಪುರ, ಪ್ರಮುಖರಾದ ರತಿಕಾಂತ ಕೋಹಿನೂರು, ಸೂರ್ಯಕಾಂತ ಬಾಬೂರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net