

ಅರಕಲಗೂಡು: ತಾಲೂಕಿನ ರಾಮನಾಥಪುರ ಶ್ರೀ ಪ್ರಸನ್ನ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಗುರುವಾರ ರಾತ್ರಿ ಹೊಸಳಿಗಮ್ಮ ದೇವತೆಗೆ ಭಕ್ತರು ಸಾವಿರಾರು ಈಡುಗಾಯಿ ಒಡೆದು ಭಕ್ತಿ- ಭಾವ ಪ್ರದರ್ಶಿಸಿದರು.
ಶ್ರೀ ಕ್ಷೇತ್ರದಲ್ಲಿ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ರಥೋತ್ಸವ ಸುಸೂತ್ರವಾಗಿ ಸಾಗಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ಹೊಸಳಿಗಮ್ಮ ದೇವತೆಗೆ ಮಹಾ ಸಂಪ್ರೋಕ್ಷಣೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಭಕ್ತರು ಸಾವಿರಾರು ಈಡುಗಾಯಿ ಒಡೆದು ಭಕ್ತಿ ಸಮರ್ಪಿಸಿದರು.
ರಾತ್ರಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು. ಪ್ರಸಾದ ವಿತರಣೆ ಮಾಡಲಾಯಿತು.
ಭಕ್ತರಿಂದ ಪೂಜೆ: ರಾಮನಾಥಪುರ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರವೂ ಅಪಾರ ಭಕ್ತರು ಪಾಲ್ಗೊಂಡಿದ್ದರು. ಕಾವೇರಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಹಣ್ಣು ತುಪ್ಪ ನೈವೃದ್ಯ ಅರ್ಪಿಸಿ ದೇವರ ದರ್ಶನ ಪಡೆದರು.