ಸಾಹಿತಿಗಳಿಗೆ ಜೀವ ಬೆದರಿಕೆಗೆ ಖಂಡನೆ

Vijayasene
Published on

ಚಿತ್ರದುರ್ಗ: ನಾಡಿನ ಸಾಹಿತಿಗಳು, ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಪತ್ರ ಬರೆದ ಶಿವಾಜಿ ಜಾಧವ್‌ನನ್ನು ಈಗಾಗಲೇ ಬಂಧಿಸಿದ್ದು, ಸಮಗ್ರ ತನಿಖೆ ಕೈಗೊಂಡು ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ನ್ಯಾಯಾಲಯದಲ್ಲೂ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮವಹಿಸಬೇಕು ಎಂದು ಸಿಎಂಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಸಾಹಿತಿಗಳಾದ ಡಾ.ಬಿ.ಎಲ್.ವೇಣು, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯ್ಕ, ಬಂಜಗೆರೆ ಜಯಪ್ರಕಾಶ್ ಅವರಿಗೆ ನಿರಂತರ ಕೊಲೆ ಬೆದರಿಕೆ ಪತ್ರಗಳು ಬರುತ್ತಿದ್ದು, ಎಂ.ಎಂ.ಕಲ್ಬುರ್ಗಿ, ಗೌರಿ ಲಂಕೇಶ್ ಇಬ್ಬರ ಹತ್ಯೆ ಪ್ರಕರಣ ಮರುಕಳಿಸಬಾರದು. ಕಿಡಿಗೇಡಿಗಳು ಯಾರೇ ಆಗಿರಲಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ವಿಜಯಸೇನೆ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ಅವಿನಾಶ್, ಜಗದೀಶ್, ನಾಗರಾಜ್ ಮುತ್ತು, ಅಖಿಲೇಶ್, ವಿಶ್ವನಾರಾಯಣ ಮೂರ್ತಿ, ಸಾಯಿಕುಮಾರ್, ಮಣಿಕಂಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net