ಸಾಹಿತ್ಯ ಓದು ಜೀವನೋತ್ಸಾಹ ಹೆಚ್ಚಿಸುತ್ತೆ

bkt-24-1
ಬಾಗಲಕೋಟೆ ನಗರದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಆಶ್ರಯದಲ್ಲಿ ನವನಗರ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಾಳಾಸಾಹೇಬ ಲೋಕಾಪುರ, ವಜ್ಜಲ ಡಾ.ಲಲಿತಾ ಹೊಸಪ್ಯಾಟಿ ಅವರನ್ನು ಸನ್ಮಾನಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ, ಡಾ.ಚಂದ್ರಶೇಖರ ಕಾಳನ್ನವರ ಇತರರು ಇದ್ದರು.
Published on

ಬಾಗಲಕೋಟೆ: ಕನ್ನಡ ನಾಡು ನುಡಿಗಾಗಿ ದುಡಿದ ಸಾಹಿತಿಗಳನ್ನು, ಕಲಾವಿದರನ್ನು ಸಮಾಜ ಹಾಗೂ ವಿವಿಧ ಕ್ಷೇತ್ರದ ಸೇವೆಕರನ್ನು ಗುರುತಿಸಿ ಗೌರವಿಸಬೇಕು. ಕಲೆಗಳು ಮನಸ್ಸಿಗೆ ಆನಂದವನ್ನುಂಟು ಮಾಡಿದರೆ, ಸಾಹಿತ್ಯ ಓದು ಜೀವನೋತ್ಸಹವನ್ನು ಹೆಚ್ಚಿಸುತ್ತದೆ ಎಂದು ಮಾಜಿ ಶಾಸಕ ಸಾಹಿತಿ ಎಸ್.ಜಿ.ನಂಜಯ್ಯನಮಠ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಆಶ್ರಯದಲ್ಲಿ ನವನಗರ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರಿಗೆ ಸನ್ಮಾನ ಹಾಗೂ ಬಾಳೆಕುಂದ್ರಿ ರಾಷ್ಟ್ರೀಯ ತಂತ್ರಜ್ಞ ಪ್ರಶಸ್ತಿ, ರನ್ನಸಿರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಹಿತ್ಯ ಓದುವ ಅಭಿರುಚಿಯಿಂದ ಮನಸ್ಸು ಪರಮಾನಂದ ಪಡೆಯುತ್ತದೆ. ನಿಸ್ವಾರ್ಥದ ಕಾಯಕವು ಸಮಾಜದಲ್ಲಿ ಘನತೆ ಮತ್ತು ಗೌರವವನ್ನು ತಂದುಕೊಡುತ್ತದೆ. ತಮ್ಮ ವೃತ್ತಿಯಲ್ಲಿ ಕರ್ತವ್ಯನಿಷ್ಠೆಯಿಂದ ಸೇವೆ ಮಾಡಿದಾಗ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಧಕರಾಗಲು ಸಾಧ್ಯವಿದೆ. ಅಂತಹ ಸಾಧಕರನ್ನು ಸರ್ಕಾರ ಗುರುತಿಸಿ ಗೌರವಿಸಿದವರನ್ನು ನಾವು ಅಭಿನಂದಿಸಬೇಕು ಇದರಿಂದ ಆತ್ಮತೃಪ್ತಿ ದೊರೆಯುತ್ತದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ೨೦೨೪ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರನ್ನು ಹಾಗೂ ಸುವರ್ಣ ಕನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರನ್ನು ಹಿರಿಯ ಸಾಹಿತಿಗಳಾದ ಎಸ್.ಜಿ.ನಂಜಯ್ಯನಮಠ ಅವರ ಸಾರಥ್ಯದಲ್ಲಿ ಗೌರವಿಸಿ ಸನ್ಮಾನಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಆರ್.ಸಿ.ಚಿತ್ತವಾಡಗಿ ಅವರು ಅಭಿನಂದನಾ ನುಡಿ ಹೇಳಿ ನಮ್ಮ ಜಿಲ್ಲೆಗೆ ಈ ಬಾರಿ ೪ ಕರ್ನಾಟಕ ರಾಜ್ಯೋತ್ಸವ ಮತ್ತು ೬ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿ ಒಟ್ಟು ನಮ್ಮ ಜಿಲ್ಲೆಗೆ ಹತ್ತು ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದರಿಂದ ಜಿಲ್ಲೆಯ ಕೀರ್ತಿ ಬೆಳಗಿದೆ ಎಂದರು.

ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಸಚಿವ ಮಹಾದೇವ ಮುರಗಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಽಕಾರಿ ಮಲ್ಲಿಕಾರ್ಜುನ ಶೆಲ್ಲಿಕೇರಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಚಂದ್ರಶೇಖರ ಕಾಳನ್ನವರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net