ಸಾಹಿತ್ಯ ಕ್ಷೇತ್ರಕ್ಕೆ ಎಚ್‌ಎಸ್‌ವಿ ಕೊಡುಗೆ ಅಪಾರ

07rajesh2
Published on

ಚಾಮರಾಜನಗರ: ಕನ್ನಡ ಸಾಹಿತ್ಯ ಪರಂಪರೆಗೆ ಎಚ್.ಸಿ.ವೆಂಕಟೇಶಮೂರ್ತಿ ಅವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಹೇಳಿದರು.

ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಎಚ್.ಎಸ್.ವೆಂಕಡೇಶಮೂರ್ತಿ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಚ್.ಎಸ್.ವೆಂಕಟೇಶ್‌ಮೂರ್ತಿ ಅವರು ಕವಿ, ಸಾಹಿತಿ, ವಿಮರ್ಶಕ, ಕಾದಂಬರಿಕಾರ ಹಾಗೂ ನಾಟಕಕಾರರಾಗಿ ಅಮೂಲ್ಯ ಕೃತಿಗಳನ್ನು ನಾಡಿಗೆ ನೀಡಿದ್ದಾರೆ. ಚಲನಚಿತ್ರ, ಕಿರುತರೆಗಳ ಮೂಲಕ ಜನಪ್ರಿಯರಾಗಿ ಎಂಟು ದಶಕಗಳ ಕಾಲ ಭಾವಗೀತೆಗಳ ಕವಿಯಾಗಿ ಜನರ ಮನದಲ್ಲಿ ಉಳಿದಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಬಿ.ಕೆ.ಆರಾಧ್ಯ, ರವಿಚಂದ್ರ ಪ್ರಸಾದ್, ಬರಹಗಾರ ಲಕ್ಷ್ಮಿ ನರಸಿಂಹ, ಸರಸ್ವತಿ, ಶಿವಲಿಂಗ ಮೂರ್ತಿ, ಕರ್ನಾಟಕ ಗಮಕ ಕಲಾ ಪರಿಷತ್ತಿನ ವಾಸಂತಿ ವಸುಪಾಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net