

ಸರಗೂರು: ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗದಲ್ಲಿ ಜ.17ರಂದು ನಡೆಯಲಿರುವ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸೌರ್ವಾಧ್ಯಕ್ಷರಾದ ಸಾಹಿತಿ ಡಾ.ವೈ.ಡಿ.ರಾಜಣ್ಣ ಅವರನ್ನು ಸೋಮವಾರ ಮೈಸೂರಿನ ನಿವಾಸದಲ್ಲಿ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.
ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಸರಗೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ ಆಹ್ವಾನ ಪತ್ರಿಕೆ ನೀಡಿ ಸನ್ಮಾನಿಸಿ, ಆಹ್ವಾನಿಸಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ನೂತನ ಸರಗೂರು ತಾಲೂಕು ರಚನೆಯಾದ ನಂತರ ನಡೆಯಲಿರುವ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಸಾಗಿವೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಜಿಲ್ಲಾ ಘಟಕದ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ನಗರ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮ್, ಮೂಗೂರು ನಂಜುಂಡಸ್ವಾಮಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಮ.ನ.ಲತಾ ಮೋಹನ್, ಡಾ.ಚಂದ್ರಕಲಾ, ಸರಗೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ನಿಂಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ರವಿ, ಎಚ್.ಡಿ.ಕೋಟೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕನ್ನಡ ಪ್ರಮೋದ್, ಈಡಿಗ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜು, ಅಕ್ರಮ- ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಚನ್ನೀಪುರ ಮಲ್ಲೇಶ್, ಎಚ್.ಎಂ.ಸುಧೀರ್, ಶಂಕರ್, ಸಾಗರೆ ಸಕಲೇಶ್, ಕಂದೇಗಾಲ ಶಿವರಾಜು, ಸತೀಶ್‌ಗೌಡ, ಜಿನ್ನಹಳ್ಳಿ ರಾಜನಾಯಕ ಹಾಜರಿದ್ದರು.