ಸಿ.ಟಿ.ರವಿ ಅವಹೇಳನಕಾರಿ ಹೇಳಿಕೆಗೆ ಖಂಡನೆ

IMG-20241219-WA0043
Published on

ಕೊಳ್ಳೇಗಾಲ: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವರ್ತನೆ ಖಂಡನೀಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಪುಟ್ಟಣ್ಣ ತಿಮ್ಮರಾಜೀಪುರ ಹೇಳಿದರು.

ಸಿ.ಟಿ ರವಿ ಅವರು ಮಹಿಳೆಯರಿಗೆ ಗೌರವವನ್ನು ಕೊಡುವುದನ್ನು ಕಲಿಯಬೇಕಿದೆ. ಅವರ ಹೇಳಿಕೆ ಇಡೀ ಸಮಾಜಕ್ಕೆ ಅವಮಾನಿಸಿದಂತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಾರ್ವಜನಿಕವಾಗಿ ಅವಹೇಳನಕಾರಿ ಪದದಿಂದ ನಿಂದಿಸಿರುವುದು ಅವರ ಕೆಟ್ಟ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ.

ಈಗಾಗಲೇ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ. ಮಾಡಿದ ತಪ್ಪಿಗೆ ಸಿ.ಟಿ ರವಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net