ಸಿ.ಟಿ.ರವಿ ವಿರುದ್ಧ ಪ್ರತಿಭಟನೆ : ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಪಿತ ಶವಯಾತ್ರೆ

C T Ravi Chikmagalur MLA
C T Ravi Chikmagalur MLA
Published on



ಹಾಸನ : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.


ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಿಂದ ಸಿ.ಟಿ.ರವಿ ಅವರ ಕಲ್ಪಿತ ಶವಯಾತ್ರೆ ನಡೆಸಿ ಎನ್.ಆರ್.ವೃತ್ತದ ಬಳಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ ಮಾತನಾಡಿ, ಸಿ.ಟಿ.ರವಿ ಅವರು ತಮ್ಮ ನಾಲಿಗೆ ಹರಿಬಿಟ್ಟು, ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವುದು ಖಂಡನೀಯ. ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಅವರಿಗೆ ಬೇರೆ, ಬೇರೆ ಹೆಸರುಗಳಿವೆ. ಇಂತಹ ಹೆಸರು ಪಡೆದಿರುವ ರವಿ ಅವರಿಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಮುಖಂಡರಾದ ಎಚ್.ಕೆ.ಮಹೇಶ್, ದೇವರಾಜೇಗೌಡ, ಬನವಾಸೆ ರಂಗಸ್ವಾಮಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಗೊರೂರು, ರವೀಶ್ ಬಸವಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net