ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನನೀಡಿ

Madesh Uppar
Published on

ಚಾಮರಾಜನಗರ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚಣೆ ಚರ್ಚೆಗಳು ನಡೆಯುತ್ತಿದ್ದು, ಉಪ್ಪಾರ ಸಮುದಾಯದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಭಗೀರಥ ಉಪ್ಪಾರ ಯುವಕರ ಸಂಘದ ಯಳಂದೂರು ತಾಲೂಕು ಅಧ್ಯಕ್ಷ ಪಿ.ಮಾದೇಶ್ ಉಪ್ಪಾರ್ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನವನ್ನು ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಲಾಗಿತ್ತು. ಈ ಕಾರಣದಿಂದ ರಾಜ್ಯಾದ್ಯಂತ ಉಪ್ಪಾರ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಈ ಬಾರಿಯೂ ಸಚಿವ ಸ್ಥಾನವನ್ನು ನೀಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಈಗಾಗಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮೂಲಕ ಮನವಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಯಳಂದೂರು ಕಸಬಾ ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ವೈ.ಬಿ.ಮಹೇಶ್, ಸಮುದಾಯದ ಮುಖಂಡರಾದ ಮಾದೇಶ್, ರಂಗಸ್ವಾಮಿ, ಮಹದೇವಶೆಟ್ಟಿ, ಬಸವಶೆಟ್ಟಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net