ಸಿಂಗಲ್ ಫೇಸ್ ವಿದ್ಯುತ್ ಬಳಸಿದಿರಿ

bescom logo
Published on

ಚಿತ್ರದುರ್ಗ: ಕೃಷಿ ಪಂಪ್‌ಸೆಟ್‌ಗಳಿಗೆ ಸಂಜೆ 6ರಿಂದ ಬೆಳಗ್ಗೆ 6ರ ಅವಧಿಯಲ್ಲಿ ಸಿಂಗಲ್ ಫೇಸ್ ವಿದ್ಯುತ್ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ ಮಾಡಿದೆ. ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೃಷಿ ಪಂಪ್‌ಸೆಟ್‌ಗಳಿಗೆ ಬಳಸುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 4 ಮತ್ತು ರಾತ್ರಿ 3 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶದ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ.

ಇದನ್ನು ಹೊರತುಪಡಿಸಿ ನೀರಾವರಿ ಫೀಡರ್‌ಗಳ ಮೂಲಕ ತೋಟದ ಮನೆಗಳಿಗೆ ಗೃಹೋಪಯೋಗಿ ಬಳಸಲು ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಿಂಗಲ್ ಫೇಸ್ ವಿದ್ಯುತ್‌ನ್ನು ಸಂಜೆ 6ರಿಂದ ಬೆಳಗ್ಗೆ 6 ವರೆಗೆ (3ತಾಸು ತ್ರಿಫೇಸ್ ವಿದ್ಯುತ್ ಹೊರತಾಗಿ)ಫೀಡರ್‌ಗಳಿಗೆ ನೀಡಲಾಗುತ್ತಿದೆ. ಆದರೆ, ರಾತ್ರಿ ವೇಳೆ ಕೆಲವರು ಕೃಷಿ ಪಂಪ್‌ಸೆಟ್‌ಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಬಳಸುತ್ತಿರುವುದರಿಂದ ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net