ಸಿಇಒ ಕುರೇರ ಅನಿರೀಕ್ಷಿತ ಭೇಟಿ ಪರಿಶೀಲನೆ

bkt-8-5
Published on

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಂಗಳವಾರ ವಿವಿಧ ಗ್ರಾಮಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವಿವಿಧ ಕಾಮಗಾರಿ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳಿಕೇರಿ, ಕೆರಕಲಮಟ್ಟಿ, ಹೂಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂದಕೇರಿ, ಅನವಾಲ, ಕೈನಕಟ್ಟಿ, ಕುಳಗೇರಿ ಕ್ರಾಸ್ ಗ್ರಾಮಗಳಿಗೆ ಭೇಟಿ ನೀಡಿ ನರೇಗಾದಡಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ಅಲ್ಲದೇ ಶಾಲಾ ಆಟದ ಮೈದಾನ, ಕಂಪೌಂಡ್, ಶೌಚಾಲಯ, ಚರಂಡಿ, ರಸ್ತೆ ಸುದಾರಣೆ ಹಾಗೂ ಗ್ರಾಮ ಪಂಚಾಯಿತಿತ ಕಟ್ಟಡ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಬಾದಾಮಿ ತಾಲೂಕಿನ ಕಾರ್ಯನಿರ್ವಾಹಕ ಅಽಕಾರಿ ಮಲ್ಲಿಕಾರ್ಜುನ ಬಡಿಗೇರ, ಸಹಾಯಕ ನಿರ್ದೇಶಕ ಸತೀಶ ಮಾಗೊಂಡ ಸೇರಿದಂತೆ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತರರು, ಬಿ.ಎಫ್.ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net