ಸಿಇಒ ಭೇಟಿ, ಕಾಮಗಾರಿ ವೀಕ್ಷಣೆ

bkt-23-12
ಜಮಖಮಡಿ ತಾಲೂಕಿನ ತುಂಗಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದ ಜಿಪಂ ಸಿಇಒ ಶಶಿಧರ ಕುರೇರ ಶಿಕ್ಷಕರು ಮತ್ತು ಮಕ್ಕಳ ಜೊತೆ ಚರ್ಚಿಸಿದರು.
Published on

ಬಾಗಲಕೋಟೆ: ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮ ವ್ಯಾಪ್ತಿಯಲ್ಲಿ ಬರುವ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡಿರುವ ಸಂಜೀವಿನಿ ಶೆಡ್ ಕಾಮಗಾರಿಯನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಪಡಿಶೀಲಿಸಿದರು.

ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಸಂಜೀವಿನಿ ಶೆಡ್ ಅಲ್ಲದೇ ಅದರ ಪಕ್ಕದಲ್ಲಿರುವ ಓವರ್‌ಹೆಡ್ ನೀರಿನ ಟ್ಯಾಂಕ್ ವೀಕ್ಷಿಸಿ ಅಲ್ಲಿ ಸತತವಾಗಿ ನೀರು ಪೂರೈಕೆ ಆಗುವದರ ಬಗ್ಗೆ ಪಿಡಿಒ ಜೊತೆ ಚರ್ಚಿಸಿದರು. ನೀರಿನ ಗುಣಮಟ್ಟವನ್ನು ಮತ್ತು ಶುಚಿತ್ವದ ಬಗ್ಗೆ ಗಮನ ಹರಿಸಲು ಸೂಚಿಸಿದರು.

ತುಂಗಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ತೋಟಗಾರಿಕೆ ಇಲಾಖೆಯಿಂದ ನಿರ್ಮಿಸಲಾದ ಕೃಷಿ ಹೊಂಡಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ನಂತರ ಅಲ್ಲಿಯ ಸರ್ಕಾರಿ ಶಾಲೆಗೆ ತೆರಳಿದ ಸಿಇಒ, ನರೇಗಾ ಯೋಜನೆಯಲ್ಲಿ ಕೈಗೊಂಡ ಫೇರ‍್ಸ್ ಕಾಮಗಾರಿ ವೀಕ್ಷಿಸಿದರು.
ಶಾಲಾ ಆಹಾರ ಸಾಮಗ್ರಿಗಳ ದಾಸ್ತಾನು ಕೊಠಡಿಗೆ ತೆರಳಿ, ಅಡಿಗೆ ಕೋಣೆಯಲ್ಲಿ ಸ್ವಚ್ಛತೆ, ಆಹಾರ ಗುಣಮಟ್ಟದ ಬಗ್ಗೆ ಕಾಳಜಿ ವಹಿಸಲು ಸೂಚಿಸಿದರು.

ವಿದ್ಯಾರ್ಥಿಗಳ ಕೊಠಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯಗಳ ಕುರಿತು ಶಿಕ್ಷಕರ ಜೊತೆ ಚರ್ಚಿಸಿದರು.
ವಲಯ ಅರಣ್ಯ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿ ಸಸಿ ನೆಡುವ ಕಾರ್ಯಕ್ರಮ ವೀಕ್ಷಿಸಿದರು. ಶೂರ್ಪಾಲಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ತುಬಚಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ನಿರ್ಮಿತವಾದ ಸಾವಯವ ಬೆಲ್ಲ ಹಾಗೂ ಎಣ್ಣೆ ಉತ್ಪಾದನೆ ಮಾಡುವ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಕೃಷ್ಣಾ ನದಿ ನೀರಿನ ಮಟ್ಟವನ್ನು ಗಮನಿಸಿ ಜನ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲು ತಿಳಿಸಿದರು. ಸಾವಳಿಯಿಂದ ಜಮಖಂಡ ಮಾರ್ಗವಾಗಿ ಸಾಗುವ ಬಿಕೆ ಜಂಬಗಿ ರಸ್ತೆ ಪಕ್ಕದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿ ನಿರ್ವಹಣೆಯಿಂದಾಗಿ ರಸ್ತೆ ಮಧ್ಯದಲ್ಲಿ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಸೂಚಿಸಿದರು.

ಭೇಟಿ ಸಮಯದಲ್ಲಿ ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಸಂಜೀವ ಜುನ್ನೂರ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಚೀನ ಮಾಚಕನೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೆ.ಪಿ.ಶೆಟ್ಟಿ, ಸಾಮಾಜಿಕ ಅರಣ್ಯ ಇಲಾಖೆಯ ಕಿರಣ ದಾಸರಡ್ಡಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ, ತಾ.ಪಂ ಸಹಾಯಕ ನಿರ್ದೇಶಕ ಸಿದ್ದಾರ್ಥ ಗೋಟೆ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net