ಸಿಇಟಿ ಪರೀಕ್ಷೆ ಸುಸೂತ್ರ, ಪರೀಕ್ಷಾ ಕೇಂದ್ರ ಪರಿಶೀಲಿಸಿದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಬಾಲಾಜಿ

29 Nela Ph 05 DD Visit
Published on

ನೆಲಮಂಗಲ: ಕೋವಿಡ್-19 ಮಧ್ಯೆಯೂ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಟಿ.ಬಾಲಾಜಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಧೈರ್ಯ ತುಂಬಿ ಶುಭ ಹಾರೈಸಿದರು.

ಕೋವಿಡ್ ಸಂಕಷ್ಟದ ಸ್ಥಿತಿಯಲ್ಲೂ ಸರ್ಕಾರ ರಾಜ್ಯದಲ್ಲಿ ಪರೀಕ್ಷೆ ನಡೆಸಲು ಮಂದಾಗಿದೆ. ಜಿಲ್ಲಾಡಳಿತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪರೀಕ್ಷಾ ಕೇಂದ್ರದಲ್ಲಿ ಸಕಲ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ 9 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 3,792 ವಿದ್ಯಾರ್ಥಿಗಳು ಪರೀಕ್ಷೆ ಬರೆದ್ದಾರೆ ಎಂದು ಟಿ.ಬಾಲಾಜಿ ತಿಳಿಸಿದರು.

ಪರೀಕ್ಷೆಯಲ್ಲಿ 250ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸಿಸಿದ್ದಾರೆ. ನೆಲಮಂಗಲ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪವಾಡ ಶ್ರೀ ಬಸವಣ್ಣ ದೇವರ ಮಠದ ಶ್ರೀ ಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕೇಂದ್ರದಲ್ಲಿ 1,032 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದರು.

ಇಲಾಖೆಯಿಂದ ವಿಶೇಷ ತಂಡರಚನೆ: ಪರೀಕ್ಷಾ ಕೇಂದ್ರದಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಲು ವಿಶೇಷ ತಹಸೀಲ್ದಾರ್ ಒಳಗೊಂಡು ವಿಶೇಷತಂಡ ರಚಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಉಪನ್ಯಾಸಕರಿಗೆ ಮಾತ್ರ ಪರೀಕ್ಷಾ ಕೊಠಡಿಯಲ್ಲಿ ವೀಕ್ಷಕರಾಗಿ ನಿಯೋಜಿಸಿಲಾಗಿದೆ. ಜತೆಗೆ ತಾಲೂಕು ಕೇಂದ್ರದಲ್ಲಿ ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ, ಕ್ಷೇತ್ರಶಿಕ್ಷಣಾಧಿಕಾರಿ ಒಳಗೊಂಡು ವಿಶೇಷ ತಂಡ ರಚನೆ ಮಾಡಿದ್ದು, ಪ್ರತಿ ಪರೀಕ್ಷಾಕೇಂದ್ರದಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾಕಾರ್ಯಕರ್ತೆರು, ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಉಪನಿರ್ದೇಶಕರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಆರೋಗ್ಯದ ಸಮಸ್ಯೆ ಕಂಡಬಂದಲ್ಲಿ ಪ್ರತಿ ತಾಲೂಕು ಕೇಂದ್ರದಲ್ಲಿ ವೈದ್ಯರು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತಿ ಪರೀಕ್ಷಾ ಕೇಂದ್ರದಲೂ ಪ್ರತೇಕ ಕೊಠಡಿ ವ್ಯವಸ್ಥೆ ಮಾಡಿದೆ. ಪರೀಕ್ಷಾ ಮೇಲ್ವಿಚಾರಕರು ಹಾಗೂ ಜಿಲ್ಲಾಮಟ್ಟದಲ್ಲಿ ನೋಟಲ್ ಅಧಿಕಾರಿಗಳು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಮುಂಜಾಗ್ರತೆಗೆ ಆದ್ಯತೆ: ಪರೀಕ್ಷಾ ಕೇಂದ್ರದಲ್ಲಿ ನಗರಸಭೆಯಿಂದ ಸ್ವಚ್ಚತೆ, ಸೋಂಕುನಿವಾರಕ ಸಿಂಪಡಣೆ ಮಾಡಲಾಗಿದೆ. ಪರೀಕ್ಷೆ ಆರಂಭಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ, ಸ್ಯಾನಿಟೈಸರ್ ಮಾಡಿದ ಬಳಿ ಪ್ರತಿ ವಿದ್ಯಾರ್ಥಿಗಳಿಗೂ ಮಾಸ್ಕ ವಿತರಣೆ ಮಾಡಲಾಗಿದೆ. ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಬಳಿ ಟ್ರ್ಯಾಕ್ ನಿರ್ಮಾಣದ ಮಾಡಲಾಗಿತ್ತು.

ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಸಿಬ್ಬಂದಿ ಗುರುದತ್, ವಿ.ಎನ್.ಜಗದೀಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಘವೇಂದ್ರ, ಉಪನ್ಯಾಸಕ ಜಗದೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net