

ಕಲಬುರಗಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಗೃಹ ಜ್ಯೋತಿ" ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 5ಕ್ಕೆ ಕಲಬುರಗಿಗೆ ಅಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮ ಯಶಸ್ಸಿಗೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು
ಸಭೆಯಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್. ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.