ಸಿಎಂ, ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಖಾಲಿಯಿಲ್ಲ

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷರ ಕುರ್ಚಿಯೂ ಖಾಲಿ ಇಲ್ಲ. ಈ ವಿಚಾರದಲ್ಲಿ ಊಹಾಪೋಹ ಅನಗತ್ಯ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಇದ್ದಾರೆ. ಇಬ್ಬರು ಸಮರ್ಥರಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹಾಕಿದ ಗೆರೆ ನಾವು ದಾಟುವುದಿಲ್ಲ. ಏನೇ ತೀರ್ಮಾನ ಮಾಡಿದರೂ ಹೈಕಮಾಂಡ್ ಮಾಡುತ್ತದೆ ಎಂದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಮುಂದೂಡಿದ್ದ ಗಾಂಧಿ ಭಾರತ ಸಮಾವೇಶವನ್ನು ಜ.21ರಂದು ನಿಗದಿಯಾಗಿದ್ದು, ಅದನ್ನು ಅರ್ಥಪೂರ್ಣವಾಗಿ ಆಚರಿಸಲಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ, ಅನೇಕರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net