ಸಿಎಂ ಜಿಲ್ಲಾ ಪ್ರವಾಸ ಇಂದು

cm siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Published on

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಫೆ. 9ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 11.30ಕ್ಕೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಬ್ರಹ್ಮವಿದ್ಯಾನಗರ ಸುಕ್ಷೇತ್ರ ಆವರಣದಲ್ಲಿನ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.

ನಂತರ ಭಗೀರಥ ಮಹಾಸಂಸ್ಥಾನ ಮಠದಿಂದ ಆಯೋಜಿಸಿರುವ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ, ರಾಷ್ಟ್ರೀಯ ಭಗೀರಥ ಜಯಂತ್ಯುತ್ಸವ, ಉಪ್ಪಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಗೆ ತೆರಳಲಿದ್ದಾರೆ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಚಿರಂಜೀವಿ ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೂ ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net