ಸಿಎಂ, ಡಿಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಗೊಂದಲವಿಲ್ಲ

IMG_20240629_120441
Published on

.

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ನಮ್ಮಲ್ಲಿ ಸಿಎಂ, ಡಿಸಿಎಂ ಹುದ್ದೆ ಖಾಲಿ ಇಲ್ಲ. ಸಿಎಂ ಹಾಗೂ ಡಿಸಿಎಂ ಹುದ್ದೆ ವಿಷಯದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಶ್ರೀ ಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ ದ ನೆಲೆಗಟ್ಟಿನಲ್ಲಿ ಸಿಎಂ ಆಗಿದ್ದಾರೆ. ಪಕ್ಷದ ಹೈ ಕಮಾಂಡ್‌ ಹಾಗೂ ಪಕ್ಷದ ಚುನಾಯಿತ ಶಾಸಕರ ತೀರ್ಮಾನ ದಿಂದ ಅವರು ಸಿಎಂ ಆಗಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ‌ ಮೊದಲ ದಿನದಿಂದಲೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ರಾಮ ಮಂದಿರ ಸೋರುತ್ತಿರುವ, ನೀಟ್ ಅಕ್ರಮ ಬಗ್ಗೆ ಅವರು ಮಾತನಾಡುವುದಿಲ್ಲ. ಉತ್ತರವೂ ಕೊಡುವುದಿಲ್ಲ ಎಂದು ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net