ಸಿಎಂ ಬದಲಾವಣೆ ಚರ್ಚೆ ನಿಲ್ಲಲಿ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

07
Published on


ಬೆಳಗಾವಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಮುಖ್ಯಮಂತ್ರಿ ಸ್ಥಾನದ ವಿಚಾರ ಬೀದಿಗಳಲ್ಲಿ ಮಾತನಾಡುವಂತಹದ್ದಲ್ಲ. ಇಂತಹ ಚರ್ಚೆಗಳು ನಿಲ್ಲಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ಇಂಥ ವಿಚಾರಗಳನ್ನು ಹೈಕಮಾಂಡ್, ಪಕ್ಷದ 135 ಶಾಸಕರು ತೀರ್ಮಾನಿಸುತ್ತಾರೆ ಎಂದರು.

ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವವರೆಗೆ, ಆಯ್ಕೆಯಾದ ಶಾಸಕರು ತೀರ್ಮಾನ ತೆಗೆದುಕೊಳ್ಳುವವರೆಗೆ ಸಿಎಂ ಸ್ಥಾನದ ಬದಲಾವಣೆಯ ಪ್ರಶ್ನೆ ಬರುವುದಿಲ್ಲ. ಪದೇ ಪದೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವುದು ಬೇಸರ ಉಂಟುಮಾಡಿದೆ ಎಂದರು.

ಮುಂದಿನ ಸಿಎಂ ಲಕ್ಷ್ಮೀ ಹೆಬ್ಬಾಳ್ಕರ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಂಥ ವಿಷಯಕ್ಕೆ ಯಾವುದೇ ಬೆಲೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net