ಸಿಎಂ ಬದಲಾವಣೆಗೆ ಬಗ್ಗೆ ನವೆಂಬರ್ ಬಳಿಕ ಪ್ರತಿಕ್ರಿಯಿಸುವೆ; ಸಚಿವ ಕೆ.ಜೆ.ಜಾರ್ಜ್

KJ George
Published on

ಹಾಸನ: ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಆರ್. ಅಶೋಕ್ ಯಾರು? ಸಿಎಂ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ನವೆಂಬರ್‌ನಲ್ಲಿ ನಾಯಕತ್ವ ಬದಲಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರೋ ಹೇಳಿದರು ಎಂದ ಮಾತ್ರಕ್ಕೆ ಸಿಎಂ ಬದಲಾಗುವುದಿಲ್ಲ. ಆರ್.ಅಶೋಕ್ ಹೇಳಿದಂತೆ ನಾನು ನವೆಂಬರ್ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ತಿರುಗೇಟು ನೀಡಿದರು.

ಇಂಧನ ಇಲಾಖೆಯಲ್ಲಿ ಎಲ್ಲ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿವೆ. ಯಾವುದೇ ಆರ್ಥಿಕ ಸಮಸ್ಯೆ ಇಲ್ಲ. ಈಗಾಗಲೇ ಇಲಾಖೆಯಲ್ಲಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ 3 ಸಾವಿರ ಲೈನ್‌ಮನ್‌ಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net