

ಹುಬ್ಬಳ್ಳಿ: ಲಿಂಗಾಯತರಿಗೆ 2ಎ ಹಾಗೂ ಲಿಂಗಾಯತ ಎಲ್ಲ ಸಮುದಾಯಗಳಿಗೆ ಕೇಂದ್ರದ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಸೆ. 20 ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಕೂಡಲಸಂಗಮದ ]ೕ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9ಗಂಟೆಗೆ ಶಿಗ್ಗಾಂವಿಯ ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಸುಮಾರು 50 ಸಾವಿರಕ್ಕಿಂತ ಹೆಚ್ಚು ಜನರು ಧರಣಿಯಲ್ಲಿ ಪಾಲ್ಗೊಳ್ಳುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಬಾಪುಗೌಡ ಪಾಟೀಲ, ವಿಜಯ ಕುಲಕರ್ಣಿ, ವಿರೇಶ ಉಂಡಿ, ಶಿವಾನಂದ ಬಾಗೂರ, ಇತರರು ಇದ್ದರು.