ಸಿಎಂ ರಾಜೀನಾಮೆ ನೀಡಬಾರದು

mysore
Published on

ಕಲಬುರಗಿ: ಮೂಡಾ ಹಗರಣದಲ್ಲಿ ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ನ್ಯಾಯಾಲಯದಲ್ಲಿ ವ್ಯತಿರಿಕ್ತ ತೀರ್ಪು ಬಂದರೆ ರಾಜೀನಾಮೆ ನೀಡದೆ, ಸುಪ್ರೀಂಕೋರ್ಟ್ಗೆ ಹೋಗಬೇಕು ಎಂದು ದಲಿತ ಮಾದಿಗ ಸಮನ್ವ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ತಾರೈಲ್ ಒತ್ತಾಯಿಸಿದರು. ಖಾಸಗಿ ವ್ಯಕ್ತಿ ನೀಡಿದ ದೂರಿನಿಂದ ೨೪ ಗಂಟೆಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಸರಿಯಲ್ಲ. ತೀರ್ಪು ವಿರುದ್ಧ ಬಂದರೆ ಸುಪ್ರೀಂ ಕೋರ್ಟ್ನಲ್ಲಿ ಹೋರಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಂಘಟನೆ ಬಸವರಾಜ ಜವಳಿ, ದಿಗಂಬರ ತ್ರಿಮೂರ್ತಿ, ಶ್ರೀಮಂತ ಭಂಡಾರಿ, ಪ್ರಕಾಶ ಮಾಳಗೆ, ನಾಗು ನಾಲವಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net