ಸಿಎಂ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಹೋರಾಟ

IMG_20250715_132144
filter: 135; fileterIntensity: 0.15; filterMask: 0; hdrForward: 0; highlight: false; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.3306478, 0.3419584);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 39;
Published on

ಬೆಳಗಾವಿ: ನಗರದ ಕಾಂಗ್ರೆಸ್ ಸಮಾವೇಶದಲ್ಲಿ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು.

ಇಲ್ಲದಿದ್ದರೆ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಎಚ್ಚರಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಎಚ್ಚರಿಸಲಾಗಿದೆ. ಆದರೆ, ಇಲ್ಲಿಯವರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ದೂರಿದರು. ಸಂಗಯ್ಯ ಹಿರೇಮಠ, ಸಿದ್ದಪ್ಪ ಬಳೆಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net