

ಚಾಮರಾಜನಗರ: ಹಾಸನದಲ್ಲಿ ನಡೆಯುವ ಜನಕಲ್ಯಾಣ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದು ಅಹಿಂದ ಜಿಲ್ಲಾಧ್ಯಕ್ಷ ಹಳೇಪುರ ಮಹೇಶ್ ಮನವಿ ಮಾಡಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಏಳಿಗೆಯನ್ನು ಸಹಿಸದೆ ವಿರೋಧ ಪಕ್ಷದ ನಾಯಕರು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸುವ ಹುನ್ನಾರ ಮಾಡಿದರು ಅದಕ್ಕೆ ಈ ಸಮಾವೇಶದಲ್ಲಿ ತಕ್ಕ ಉತ್ತರ ನೀಡಲಾಗುತ್ತದೆ. ಈ ಸಮಾವೇಶಕ್ಕೆ ಜಿಲ್ಲೆಯಿಂದ 400 ಬಸ್ ಗಳಲ್ಲಿ ತೆರಳುತಿದ್ದಾರೆ. ಈ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಅಹಿಂದ ಸಂಘಟನೆಯ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷ ಕಾವೇರಿಶಿವಕುಮಾರ್, ಕಾಂಗ್ರೆಸ್ ಮಹಿಳಾ ಕಾರ್ಯದರ್ಶಿ ಪದ್ಮಪುರುಷೋತ್ತಮ್, ಜಿಲ್ಲಾ ಕಾರ್ಯಾಧ್ಯಕ್ಷ ಕೆರೆಹಳ್ಳಿ ರಾಜಕುಮಾರ್, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಕೆ.ಬಿ.ಉಮೇಶ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಮಂಜುನಾಥ್ ಮುಳ್ಳೂರು, ಜಿಲ್ಲಾ ವಿದ್ಯಾರ್ಥಿ ಘಟಕ ಅಧ್ಯಕ್ಷ ಕೆ. ಪುನೀತ್ ಕುಮಾರ್, ಯಳಂದೂರು ತಾಲೂಕು ಅಧ್ಯಕ್ಷ ಶ್ರೀನಿವಾಸ ಗಣಿಗನೂರು ಹಾಜರಿದ್ದರು.