ಸಿಎಂ ಸಂಡೂರು ಭೇಟಿ, ಉಪ ಚುನಾವಣೆ ಗಿಮಿಕ್

Published on

ಬಳ್ಳಾರಿ ; ಸಿಎಂ ಸಿದ್ದರಾಮಯ್ಯ ಅವರು ಸಂಡೂರು ಪಟ್ಟಣಕ್ಕೆ ಭೇಟಿ ನೀಡಿರುವುದು ಉಪ ಚುನಾವಣಾ ಗಿಮಿಕ್ ಆಗಿದೆ ಎಂದು
ವಿಧಾನ ಪರಿಷತ್ ಸದಸ್ಯ ವೈ. ಎಂ. ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.
ಈ ಕ್ಷೇತ್ರದ ಪ್ರಬುದ್ಧ ಮತದಾರರು ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ಗಮನಿಸಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ. ಉಪ ಚುನಾವಣೆ ಘೋಷಣೆ ವೇಳೆ ಸಿಎಂ ಸಿದ್ದರಾಮಯ್ಯ ಭೂಮಿಪೂಜೆ, ಉದ್ಘಾಟನೆ, ಶಂಕುಸ್ಥಾಪನೆ, ಸಾಧನಾ ಸಮಾವೇಶ ಇತರೆ ಚುನಾವಣಾ ಗಿಮಿಕ್‌ಗಳು. ಕರ್ನಾಟಕ ಸರ್ಕಾರದಲ್ಲಿ ಹಣದ ಕೊರತೆ ಇರುವುದಾಗಿ ಪದೇ ಪದೇ ಹೇಳುತ್ತಿರುವ ಮುಖ್ಯಮಂತ್ರಿಗಳು, ಯಾವ ನೈತಿಕತೆಯ ಆಧಾರದ ಮೇಲೆ ಸಂಡೂರು ಪಟ್ಟಣಕ್ಕೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು ಎಂಬುದು ಮತದಾರರಿಗೆ ಚೆನ್ನಾಗಿ ಅರ್ಥವಾಗುತ್ತಿದೆ ಎಂದರು. ಸಂಸದ ಈ. ತುಕಾರಾಮ್ ಅವರ ಆಯ್ಕೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ 20. 19 ಕೋಟಿ ರೂ. ವ್ಯಯ ಆಗಿರುವುದು ತನಿಖಾ ಸಂಸ್ಥೆಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ನಮೂದಾಗಿದೆ ಎಂದರು. ಶೀಘ್ರದಲ್ಲಿಯೇ ಘೋಷಣೆ ಆಗಲಿರುವ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net