ಸಿಎಂ ಸಿದ್ದರಾಮಯ್ಯ 4 ದಿನ ಮೈಸೂರಿನಲ್ಲೇ ಠಿಕಾಣಿ

Siddaramaiah
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.27ರಿಂದ 30ರ ವರೆಗೆ ನಗರದ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.


27ರಂದು ರಾತ್ರಿ 8ಗಂಟೆಗೆ ನಗರಕ್ಕೆ ಆಗಮಿಸುವ ಅವರು ಸ್ಥಳೀಯ ಕಾರ್ಯ ಕ್ರಮದಲ್ಲಿ ಭಾಗವಹಿಸುವರು. 28ರಂದು ಬೆಳಗ್ಗೆ 11ಕ್ಕೆ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಿರುವ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ಸಿದ್ಧಾರ್ಥನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್‌ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.


29ರಂದು ಬೆಳಗ್ಗೆ 10.30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1.45ಕ್ಕೆ ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರ ಸಂಘದ ಕಚೇರಿಗೆ ಭೇಟಿ ನೀಡುವರು.


30ಬುಧವಾರ ಬೆಳಗ್ಗೆ 11ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮೀ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.50ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net