

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ. ಮುಡಾ ಹಗರಣದಲ್ಲಿ ಅವರ ಪಾತ್ರವಿಲ್ಲ. ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಮಾತ್ರಕ್ಕೆ ರಾಜೀನಾಮೆ ನೀಡುವುದು ಅಪ್ರಸ್ತುತ. ಬಿಜೆಪಿ ಪಕ್ಷವು ಸಿಎಂ ಸಿದ್ದರಾಮಯ್ಯ ನವರ ಬಗ್ಗೆ ಎಲ್ಲವು ಗೊತ್ತಿದ್ದರು ಆತ್ಮ ವಂಚನೆ ಮಾಡಿಕೊಂಡು ಹೋರಾಟ ನಡೆಸುತ್ತಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ರಕ್ಷಿತಾ ಭರತಕುಮಾರ ಈಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವಿರುವುದು ಎಲ್ಲಿಯೂ ಕಂಡು ಬಂದಿಲ್ಲ. ಅಪರಾಧಿ ಅಂತ ಸಾಬೀತು ಆಗಿಲ್ಲ. ಸುಖಾಸುಮ್ಮನೇ ಆರೋಪ ಹೊರಿಸುವುದು ತರವಲ್ಲ. ಹಾಗೇ ನೋಡಿದರೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪಾತ್ರವಿರುವ ಅನೇಕ ಪ್ರಕರಣಗಳಿವೆ ಅವರು ಮೊದಲು ರಾಜೀನಾಮೆ ನೀಡಬೇಕು.ಮುಡಾ ಕೇವಲ ರಾಜಕೀಯ ಪ್ರೇರಿತವಾಗಿ ಬಳಸಿಕೊಳ್ಳಲಾಗುತ್ತಿದೆ. ಕೋಟ್ಯಂತರ ಕಾರ್ಯಕರ್ತರು, ಅಭಿಮಾನಿಗಳು, ಅಹಿಂದ ವರ್ಗ ಸಿದ್ದರಾಮಯ್ಯ ನವರ ಬೆಂಬಕ್ಕೆ ನಿಂತಿದೆ. ಬಿಜೆಪಿ ಪಕ್ಷದ ನಾಯಕರು ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ತಿಳಿಸಿದ್ದಾರೆ.