ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಅರಕಲಗೂಡು ಗ್ರಾಮದೇವತೆ ದೊಡ್ಡಮ್ಮ ದೇವಸ್ಥಾನದಲ್ಲಿ ಗುರುವಾರ ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
3ark3
Published on

ಅರಕಲಗೂಡು: ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ನೇತೃತ್ವದಲ್ಲಿ ಪಟ್ಟಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76ನೇ ಹುಟ್ಟು ಹಬ್ಬವನ್ನು ಆಚರಿಸಲಾಯಿತು.


ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀಧರ್‌ಗೌಡ ಅವರ ಅಭಿಮಾನಿಗಳು ಗ್ರಾಮದೇವತೆ ಶ್ರೀದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಉತ್ತಮ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಆರೋಗ್ಯ, ಆಯಸ್ಸು ನೀಡುವಂತೆ ಪ್ರಾರ್ಥಿಸಿದರು. ನಂತರ ಬೃಹತ್ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.


ಮುಖಂಡ ಶ್ರೀಧರ್‌ಗೌಡ ಮಾತನಾಡಿ, ರಾಷ್ಟ್ರವೇ ಮೆಚ್ಚುವ ದಕ್ಷ ಆಡಳಿತಗಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರು ಮತ್ತು ಸಂಕಷ್ಟಕ್ಕೆ ಒಳಗಾದವರಿಗೆ ನೆರವು ನೀಡಿದ್ದಾರೆ ಎಂದರು.
ಪಪಂ ಸದಸ್ಯ ಸುಭಾನ ಷರೀಫ್, ಮಾಜಿ ಉಪಾಧ್ಯಕ್ಷ ಸಲೀಂ ಅಹಮದ್, ಮುಖಂಡರಾದ ಪುಷ್ಪಕುಮಾರ್, ವೀರಣ್ಣ, ದಶರಥ, ಧರಣಿ, ನಾಗರಾಜು, ಧರ್ಮ, ಶಾಬಾಜ್, ಇರ್ಷಾದ್, ಪುಟ್ಟಯ್ಯ, ಲಕ್ಷ್ಮಣ್, ಸಂತೋಷ್, ಗುರುಮೂರ್ತಿ, ಕಬ್ಬಳಿಗೆರೆ ಸೋಮು ಇತರರಿದ್ದರು.

ಹಣ್ಣು ವಿತರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಅವರು ಕಾರ್ಯಕರ್ತರೊಂದಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net