

ಮದ್ದೂರು: ಸರ್ಕಾರ ಕಬ್ಬಿಗೆ ಬೆಂಬಲ ಬೆ ನಿಗದಿ ಮಾಡುವುದರ ಜತೆಗೆ ಭತ್ತ, ರಾಗಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಡಿ.16ರಂದು ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ್‌ಚನ್ನಸಂದ್ರ ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಭಾಗವಹಿಸಲಿದ್ದು, ರೈತರ ಜತೆಗೂಡಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಎಗ್ಗಿಲ್ಲದೆ ನಡೆಯುತ್ತಿರುವ ಮರಳುಗಾರಿಕೆ ತಡೆಯಬೇಕು. ಪಟ್ಟಣದ ಶಿವಪುರದ ಐತಿಹಾಸಿಕ ಸ್ಮಾರಕ ಧ್ವಜಾ ಸತ್ತಾಗ್ರಹಸೌಧ ಅಭಿವೃದ್ಧಿಪಡಿಸಬೇಕು. ಚರ್ಮ ಗಂಟು ರೋಗ ತಡೆಗೆ ಕ್ರಮ ವಹಿಸುವುದರ ಜತೆಗೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಪುರಸಭಾ ವ್ಯಾಪ್ತಿಯಲ್ಲಿ ಕಟ್ಟಡ ಹಾಗೂ ಮನೆ ನಿರ್ಮಾಣಕ್ಕೆ ಬಿಎಂಐಸಿಯಿಂದ ಅನುಮತಿ ಪಡೆಯಲು ಬೆಂಗಳೂರಿಗೆ ಹೋಗಬೇಕಾ ಗಿರುವುದರಿಂದ ಪಟ್ಟಣದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಈ ಕೂಡಲೇ ಅದನ್ನು ರದ್ದುಪಡಿಸಿ ಪುರಸಭೆಯಿಂದ ಲೆಸೆನ್ಸ್ ಕೊಡಿಸಕೊಡುವ ಸಂಬಂಧ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.