ಸಿಐಡಿ ತನಿಖೆ ವರದಿ ಬರುವವರೆಗೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಇಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

psi exam scam
Published on

ಮೈಸೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಿ ಅಂತಿಮ ವರದಿ ನೀಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾನಾಡಿದ ಅವರು, ನೇಮಕಾತಿಯಲ್ಲಿ ನಡೆದ ಅಕ್ರಮದ ಕುರಿತು ತನಿಖೆ ನಡೆಯುತ್ತಿದ್ದು, ಹಿರಿಯ ಪೋಲಿಸ್ ಅಧಿಕಾರಿಗಳು ಸೇರಿದಂತೆ 107 ಆರೋಪಿಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿರುವ ಹಿನ್ನೆಲೆಯಲ್ಲಿ ಈ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿದ್ದೇವೆ. ಯಾವುದೇ ರಾಜಕೀಯ ಲಾಭಿ, ಒತ್ತಡಗಳಿಗೆ ಮಣಿದು ವರ್ಗಾವಣೆ ಮಾಡುತ್ತಿಲ್ಲ. ಅಧಿಕಾರಿಗಳ ವರ್ಗಾವಣೆಗೆ ಇರುವ ನಿಯಮಾವಳಿಯಂತೆ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಹಲವಾರು ರೀತಿಯ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಆನ್‌ಲೈನ್‌ನಲ್ಲಿ ದೂರು ದಾಖಲು, 112 ಸಹಾಯವಾಣಿಗೆ ಕರೆ ಮಾಡಿದರೆ ನಗರ ಪ್ರದೇಶದಲ್ಲಿ 9 ನಿಮಿಷ, ಗ್ರಾವಾಂತರ ಪ್ರದೇಶದಲ್ಲಿ 20 ನಿಮಿಷದೊ ಳಗೆ ಸ್ಥಳಕ್ಕೆ ಪೊಲೀಸರು ಹಾಜರಾಗಿ ಕ್ರಮ ವಹಿಸುತ್ತಾರೆ. ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಗಳನ್ನು ಈಗಾಗಲೇ ತೆರೆಯಲಾಗಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭ ಪೊಲೀಸ್ ಇಲಾಖೆಯಲ್ಲಿ ಶೇ.35ರಷ್ಟು ಹುದ್ದೆಗಳು ಖಾಲಿ ಇತ್ತು. ಹೊಸದಾಗಿ 5 ಸಾವಿರ ಪೊಲೀಸರ ನೇಮಕಾತಿಗೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸ್ವಂತ ಕಟ್ಟಡ ಇಲ್ಲದ ಠಾಣೆಗಳಿಗೆ ಹೊಸದಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಹರಿಯಾಣದಲ್ಲಿ ನಡೆದ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನದಲ್ಲಿ ಕರ್ನಾಟಕ ಪೊಲೀಸ್ ಬಗ್ಗೆ ಪ್ರಸಂಶೆ ವ್ಯಕ್ತವಾಗಿದೆ ಎಂದರು.

ಅಲ್ಪಸಂಖ್ಯಾತರ ಮತಗಳನ್ನು ಪಡೆಯಲು ಕಾಂಗ್ರೆಸ್ ನಾುಂಕರು ಜೊಲ್ಲು ಸುರಿಸುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಹಿಂದು ಪದ ಕುರಿತು ಅಶ್ಲೀಲವಾಗಿ ವಾತನಾಡಿದ್ದ ಶಾಸಕ ಸತೀಶ್ ಜಾರಕೊಹೊಳಿ ವಿಷಾದ ವ್ಯಕ್ತಪಡಿಸಿದ್ದಾರೆ. ಹೇಳೋದೆಲ್ಲ ಹೇಳಿ ಅದೇನೋ ಆಯಿತು ಎನ್ನುವ ಗಾದೆಯಂತೆ ಈಗ ವಿಷಾದ ವ್ಯಕ್ತಪಡಿಸಿದರೆ ಜನರು ನಂಬಲ್ಲ. ಅಲ್ಪ ಸಂಖ್ಯಾತರನ್ನು ಓಲೈಸಿಕೊಂಡು ರಾಜಕಾರಣ ವಾಡುತ್ತಿರುವ ಕಾಂಗ್ರೆಸ್ ಬರೀ ಜೊಲ್ಲು ಸುರಿಸುವುದೇ ಆಗಿದೆ ಎಂದು ಲೇವಡಿ ವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net