ಸಿಐಡಿ ತನಿಖೆಯಿಂದ ಪರಿಹಾರ ಸಿಗುವುದಿಲ್ಲ

IMG_20240422_155626
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಗೆ ವಹಿಸುವುದರಿಂದ ಪರಿಹಾರ ಸಿಗುವುದಿಲ್ಲ. ತಕ್ಷಣ ಸಿಬಿಐಗೆ ವಹಿಸಬೇಕು ಎಂದು‌‌ ಮಾಜಿ‌ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಮೃತ ನೇಹಾಳ‌ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಕಣ್ಣೊರೆಸುವ ತಂತ್ರವಾಗಿದೆ. ನೇಹಾ ಹತ್ಯೆ ಯ ಬಳಿಕ ಹಿಂದು ಸಮಾಜ ಇಷ್ಟೊಂದು ಜಾಗೃತವಾಗುತ್ತದೆ ಎಂಬ ಕಲ್ಪನೆ ರಾಜ್ಯ ಸರ್ಕಾರಕ್ಕೆ ಇರಲಿಲ್ಲ. ಜಾಗೃತ ವಾಗಿರುವುದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net