ಸಿಗರೇಟ್ ಪ್ಯಾಕ್‌ನಲ್ಲಿ ಡ್ರಗ್ಸ್ ಮಾರಾಟ..!

Drugs-2
Published on

ಹಾಸನ: ಸಿಗರೇಟ್ ಪ್ಯಾಕ್‌ನಲ್ಲಿ ಮಾದಕ ವಸ್ತು ಇಟ್ಟು ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಆನೆಮಹಲ್ ಗ್ರಾಮದ ಲಾರಿ ಚಾಲಕ ಆಶ್ರಫ್ (36) ಬಂಧಿತ ಆರೋಪಿ.

ಸಕಲೇಶಪುರ ತಾಲ್ಲೂಕಿನ ಆನೆಮಹಲ್ ಗ್ರಾಮದ ಬಳಿ ದುರ್ಗಾ ಇಂಟರ್ನ್ಯಾಷನಲ್ ಹೋಟೆಲ್ ಹತ್ತಿರ ಮೀಥೈಲ್ಡೋಕ್ಸಿ ಮೆಥಾಂಫೆಟಮೈನ್ ಎಂಬ ಮಾದಕ ವಸ್ತುವನ್ನು ಸಿಗರೇಟ್ ಪ್ಯಾಂಕ್‌ನಲ್ಲಿ ಇಟ್ಟು ಮಾರಾಟ ಮಾಡುತ್ತಿದ್ದ ಆಶ್ರಫ್ ಎಂಬತನ್ನು ಬಂಧಿಸಿ ಆತನಿಂದ 2.07 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಮಂಗಳೂರಿನಿಂದ ಮಾದಕವಸ್ತು ತರಿಸಿಕೊಂಡು ಪಟ್ಟಣದಲ್ಲಿ ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದು ಬದಿದ್ದು, ಈ ಬಗ್ಗೆ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net