ಸಿಜಿಕೆ ಜೀವನ ಯುವ ಪೀಳಿಗೆಗೆ ಪ್ರೇರಣಾದಾಯಕ

12-08-Shiva-1
ರಾಯಚೂರಿನ ಕನ್ನಡ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಸಮಾರಂಭವನ್ನು ಹಿರಿಯ ಸಾಹಿತಿ ಬಾಬು ಭಂಡಾರಿಗಲ್ ಉದ್ಘಾಟಿಸಿದರು. ರಂಗಭೂಮಿ ಕಲಾವಿದರಾದ ವಿ.ಎನ್.ಅಕ್ಕಿ, ಮಲ್ಲನಗೌಡ ಇಂದಪುರ, ಪ್ರವೀಣರೆಡ್ಡಿ ಗುಂಜಳ್ಳಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಗುರುನಾಥ, ರಂಗಸಿರಿ ಸಾಂಸ್ಕೃತಿಕ ಬಳಗದ ಅಧ್ಯಕ್ಷ ರಂಗಸ್ವಾಮಿ ಇದ್ದರು.
Published on

ರಾಯಚೂರು: ರಂಗಭೂಮಿಗಾಗಿ ತಮ್ಮ ಜೀವನವನ್ನು ಮುಡುಪಾಗಿದ್ದರಿಂದ ಸಿಜಿಕೆ ಅವರ ಜೀವನ ಮತ್ತು ಆದರ್ಶಗಳು ಇಂದಿನ ಯುವ ಪೀಳಿಗೆಗೆ ಪ್ರೇರಣಾದಾಯಕವಾಗಿದೆ ಎಂದು ಹಿರಿಯ ಸಾಹಿತಿ ಬಾಬು ಭಂಡಾರಿಗಲ್ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಕರ್ನಾಟಕ ಬೀದಿ ನಾಟಕ ಅಕಾಡೆಮಿ ಮತ್ತು ರಂಗಸಿರಿ ಸಾಂಸ್ಕೃತಿಕ ಕಲಾ ಬಳಗದಿಂದ ಶನಿವಾರ ಆಯೋಜಿಸಿದ್ದ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಿಜಿಕೆ ನಾಟಕಗಳಲ್ಲಿ ಹೊಸತನವಿರುತ್ತಿತ್ತು ಎಂದರು.
ಸಿಜಿಕೆ ಕಲಾವಿದರ ತಂಡ ಕಟ್ಟಿಕೊಂಡು ನಾಡಿನಾದ್ಯಂತ ವಿನೂತನ ರಂಗ ಪ್ರಯೋಗಗಳನ್ನು ಮಾಡಿದ್ದರು. ರಾಜ್ಯದ ರಂಗಭೂಮಿಗೆ ಸಿಜಿಕೆ ಕೊಡುಗೆ ಅಪಾರವಾಗಿದೆ. ಸಮುದಾಯ ಸಂಘಟನೆ ಮೂಲಕ ರಂಗಭೂಮಿ ಪ್ರವೇಶ ಮಾಡಿದ ಸಿಜಿಕೆ ಹಲವಾರು ನಾಟಕಗಳ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಗುರುನಾಥ ಮಾತನಾಡಿ, ಬೆಂಗಳೂರು ವಿವಿಯಲ್ಲಿ ಅರ್ಥಶಾಸ ಅಧ್ಯಾಪಕರಾಗಿ, ಗಾಂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕೆಲಸ ಮಾಡುವುದರ ಜತೆಗೆ ಸಿಜಿಕೆ ರಂಗಭೂಮಿ ಕ್ಷೇತ್ರದಲ್ಲಿ ಅಗಾಧ ಸಾಧನೆ ಮಾಡಿದ್ದರು.
ರಂಗಭೂಮಿಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು ತಮ್ಮ ಕೊನೆ ಉಸಿರು ಇರುವವರೆಗೂ ರಂಗಭೂಮಿಯ ಬೆಳವಣಿಗಾಗಿ ದುಡಿದರು. ಅವರು ಮಾಡಿದ ರಂಗ ಪ್ರಯೋಗಗಳು ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ. ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಸುರೇಶಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಮಾಡಲಾಯಿತು. ರಂಗಭೂಮಿ ಕಲಾವಿದರಾದ ವಿ.ಎನ್.ಅಕ್ಕಿ, ಪ್ರವೀಣರೆಡ್ಡಿ ಗುಂಜಳ್ಳಿ, ಸಿಜಿಕೆ ಬೀದಿ ರಂಗ ದಿನ ಆಚರಣೆ ಸಮಿತಿ ಸಂಚಾಲಕ ಸಿ.ಎಂ.ಸುರೇಶ ಮಾತನಾಡಿದರು.
ಹಿರಿಯ ರಂಗಭೂಮಿ ಕಲಾವಿದ ಮಲ್ಲನಗೌಡ ಇಂದಪುರ ಅಧ್ಯಕ್ಷತೆ ವಹಿಸಿದ್ದರು. ರಂಗಸಿರಿ ಸಾಂಸ್ಕೃತಿಕ ಬಳಗದ ಅಧ್ಯಕ್ಷ ರಂಗಸ್ವಾಮಿ, ಕಲಾವಿದರಾದ ವೆಂಕಟನರಸಿಂಹಲು, ನಿರ್ಮಲಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net