ಚಾಮರಾಜನಗರ: ಚುನಾವಣೆಗಳು ಬಂದಾಗ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುವ ಸಿದ್ದರಾಮಯ್ಯ ಅವರು ಈಗ 2028 ರ ಚುನಾವಣೆಯಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವುದು ಅವರ ಅಧಿಕಾರದ ಮದ ಮತ್ತು ಹಣದ ಅಹಂಕಾರವನ್ನು ತೋರಿಸುತ್ತದೆ ಎಂದು ಜಗದೀಶ್ ಶೆಟ್ಟರ್ ನುಡಿದರು.
ಕಾಂಗ್ರೆಸ್ ಹೈಕಮಾಂಡ್ ಬಹುಶಃ ನವೆಂಬರ್‌ನಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ಹೇಳಿರಬಹುದು ಅದಕ್ಕಾಗಿ ಇಂತಹ ಮಾತುಗಳನ್ನಾಡುತ್ತಿದ್ದಾರೆ. ಅಧಿಕಾರದ ಹಸ್ತಾಂತರದ ವಿಚಾರವನ್ನು ಇಟ್ಟುಕೊಂಡು ಜನರನ್ನು ದಿಕ್ಕುತಪ್ಪಿಸದೇ ಯಾವುದೇ ತೀರ್ಮಾಣವಾಗಿದ್ದರೂ ಕಾಂಗ್ರೆಸ್‌ನವರು ಬಹಿರಂಗಪಡಿಸಬೇಕು ಎಂದು ಹೇಳಿದರು.