

ಅರಕಲಗೂಡು: ಪಕ್ಷ ಸಂಘಟಿಸಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾರ್ಯಕರ್ತರು ಸಹಕರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಟಿ.ಕೃಷ್ಣೇಗೌಡ ಹೇಳಿದರು.
ತಾಲೂಕಿನ ರಾಮನಾಥಪುರದಲ್ಲಿ ಮಂಗಳವಾರ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮುಖ್ಯ. ಕಾರ್ಯಕರ್ತರು ಸಂಘಟನಾತ್ಮಕವಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಮುಂದಿನ ತಿಂಗಳು ತಾಲೂಕಿಗೆ ಸಿದ್ದರಾಮಯ್ಯ ಅವರು ಆಗಮಿಸುತ್ತಿದು,್ದ ಬಿಳಗೂಲಿಯಲ್ಲಿ ನಡೆಯುವ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರಲ್ಲದೆ, ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚಿಸಿದರು.
ಮುಖಂಡರಾದ ಬಿಳಗೂಲಿ ರಾಮೇಗೌಡ, ಹುಚ್ಚೇಗೌಡ, ಶಿರದನಹಳ್ಳಿ ಕುಮಾರ್, ಅರ್ಚಕ ನಾಗರಾಜು, ಲಕ್ಕೂರು ಬಸವರಾಜು, ಬೂದನೂರು ರವಿ, ಗಂಗೂರು ಯೋಗೇಶ್, ಯೋಗಣ್ಣ, ಕೇಶವಮೂರ್ತಿ, ವಕೀಲ ಹೇಮಂತ್, ಮಂಜು, ದಿನೇಶ್, ಉದಯ್, ಅನಿಲ್, ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಭಾಗವಹಿಸಿದ್ದರು.