

ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಹೆಸರು ಇಡುವ ಪ್ರಸ್ತಾವನೆಗೆ ಬಿಜೆಪಿಯಿಂದ ವಿರೋಧ ವ್ಯಕ್ತವಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ಮುಖಂಡರು ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ, ಪರ-ವಿರೋಧ ಚರ್ಚೆ ಕಾವು ಪಡೆದುಕೊಳ್ಳುವ ಮೂಲಕ ಮಾತಿನ ಜಟಾಪಟಿಯೂ ಮುಂದುವರಿದಿದೆ.
ಬಿಜೆಪಿ ನಾಯಕರು ಗುರುವಾರ ಸುದ್ದಿಗೋಷ್ಠಿ ನಡೆಸಿ ಯಾವುದೇ ಕಾರಣಕ್ಕೂ ಈ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡಬಾರದು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ನಗರಾಧ್ಯಕ್ಷ, ಮಾಜಿ ಶಾಸಕ ಎಲ್.ನಾಗೇಂದ್ರ ಮಾತನಾಡಿ, ನಗರದ ಕೆಆರ್‌ಎಸ್ ರಸ್ತೆಯನ್ನು ಪ್ರಿನ್ಸೆಸ್ ರಸ್ತೆ ಎಂದು ಕರೆಯಲಾಗುತ್ತದೆ. ಅಂದಿನ ಮೈಸೂರಿನ ಮಹಾರಾಣಿ ಅವರ ಸ್ಮರಣಾರ್ಥವಾಗಿ ಪ್ರಿನ್ಸೆಸ್ ರಸ್ತೆ ಎಂದು ಹೆಸರಿಡಲಾಗಿದೆ. ಈ ವಿಚಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿದೆಯೋ, ಇಲ್ಲವೋ ತಿಳಿದಿಲ್ಲ. ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಮರುನಾಮಕರಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದಾರೆ. ಬದುಕಿದ್ದಾಗ ಯಾರ ಹೆಸರನ್ನು ರಸ್ತೆಗೆ ಇಡುವುದಿಲ್ಲ. ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಹೆಸರಿಡಬಾರದು. ಈ ವಿಚಾರ ಬಹುಶಃ ಸಿದ್ದರಾಮಯ್ಯ ಅವರಿಗೆ ತಿಳಿಯದೇ ಇರಬಹುದು. ತಿಳಿದರೆ ಅವರೂ ಇದಕ್ಕೆ ಒಪ್ಪುವುದಿಲ್ಲ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಸ್ತೆ ಎಂದು ಹೆಸರಿಡಬಾರದು ಎಂದು ಆಗ್ರಹಿಸಿದರು.
ನಗರದ ರಿಂಗ್ ರಸ್ತೆಗೆ ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ.ಕೃಷ್ಣ ಅವರ ಹೆಸರಿಡಬೇಕು. ಈ ಬಗ್ಗೆ ಮೈಸೂರು ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಬಿಜೆಪಿ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಆರ್.ರಘು ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಈಗ ಕಳಂಕವಿದೆ. ಇಂತಹ ಸಂದರ್ಭದಲ್ಲಿ ಪ್ರಿನ್ಸೆಸ್ ರಸ್ತೆಗೆ ಅವರ ಹೆಸರಿಡಲು ಮುಂದಾಗಿರುವುದು ಸರಿಯಲ್ಲ. ಸದ್ಯಕ್ಕೆ ಮಹಾನಗರ ಪಾಲಿಕೆ ಸದಸ್ಯರು ಇಲ್ಲ. ಮಹಾನಗರ ಪಾಲಿಕೆ ಕೌನ್ಸಿಲ್ ಸಭೆ ನಿರ್ಣಯ ಕೈಗೊಳ್ಳದೆ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವರು ಓಲೈಕೆಗಾಗಿ ಸಿದ್ದರಾಮಯ್ಯ ಅವರ ಹೆಸರಿಡಲು ಮುಂದಾಗಿದ್ದಾರೆ. ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಗುಡುಗಿದರು.
ಇದು ಹಾಸ್ಯಾಸ್ಪದ: ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿದ್ದಾರೆ. ಸಿದ್ದರಾಮಯ್ಯ ಗುರುತರ ಆರೋಪ ಹೊತ್ತಿದ್ದಾರೆ. ನೂರಾರು ವರ್ಷಗಳ ಇತಿಹಾಸ ಇರುವ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ರಸ್ತೆ ಎಂದು ಮರುನಾಮಕರಣ ಮಾಡಲು ಕೆಲವರು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದರು
ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಸಹಮತ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಆರ್.ರಘು ಹರಿಹಾಯ್ದರು.
ಪ್ರತಾಪ್ ಸಿಂಹ ಬಕೆಟ್ ಹಿಡಿಯುವುದನ್ನು ಬಿಡಬೇಕು. ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಬೇಕು ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿರುವುದು ಬಕೆಟ್ ಹಿಡಿದಂತೆಯೇ. ಇವರು ಯಾವ ಉದ್ದೇಶಕ್ಕಾಗಿ ಬಕೆಟ್ ಹಿಡಿಯುತ್ತಿದ್ದಾರೋ ಗೊತ್ತಿಲ್ಲ. ಯಾರನ್ನು ಓಲೈಕೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದು ಕುಟುಕಿದರು.
ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಪ್ರಸ್ತಾಪಿಸಿದ್ದೇ ನಾನು. ಆದರೆ, ಇದಕ್ಕೆ ಹೊಟ್ಟೆ ಕಿಚ್ಚಿನಿಂದ ವಿರೋಧ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ಕಿಡಿಕಾರಿದ್ದಾರೆ.
ಮಹಾರಾಜರ ನಂತರ ಮೈಸೂರಿಗೆ ಅತಿ ಹೆಚ್ಚು ಕೊಡುಗೆ ಕೊಟ್ಟವರು ಸಿದ್ದರಾಮಯ್ಯ. ಶಾಲಾ, ಕಾಲೇಜುಗಳ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಅವರ ಕೊಡುಗೆ ಬಹಳ ದೊಡ್ಡದು. ಮನಸು ಶುದ್ಧಿ ಇಲ್ಲದವರು ಮಾತ್ರ ಸಿದ್ದರಾಮಯ್ಯ ಅವರ ಹೆಸರು ವಿರೋಧಿಸುತ್ತಾರೆ ಎಂದು ಕುಟುಕಿದರು.
ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ. ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದು ತಪ್ಪಲ್ಲ ಎಂದು ಬಿಜೆಪಿ ಹೇಳುತ್ತದೆ. ಇದು ಬಿಜೆಪಿ ಲಕ್ಷಣ. ಸಿದ್ದರಾಮಯ್ಯ ಮೇಲೆ ಸುಮ್ಮನೆ ಆಪಾದನೆ ಮಾಡುತ್ತಿದ್ದಾರೆ. ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆಆರ್‌ಎಸ್ ರಸ್ತೆಗೆ ಕಾನೂನಾತ್ಮಕವಾಗಿಯೇ ಇಡುತ್ತೇವೆ ಎಂದು ಹೇಳಿದರು.
ಪ್ರತಾಪ್ ಸಿಂಹ ಹೇಳಿದ್ದನ್ನು ಕೇಳಿ ಖುಷಿಯಾಯಿತು. ಅವರು ಚೆನ್ನಾಗಿ ಸಿದ್ದರಾಮಯ್ಯ ಅವರ ಸಾಧನೆ ವಿವರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ, ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ