ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ

3
Published on

ರಾಮದುರ್ಗ: ರಾಜ್ಯದ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ಹಿಂಪಡೆದುಕೊಳ್ಳಬೇಕೆಂದು ಒತ್ತಾಯಿಸಿ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೇತತ್ವದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಪಂ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕೇಂದ್ರ ಸರ್ಕಾರದ ವಿರುದ್ಧ ೂಷಣೆ ಕೂಗುತ್ತ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಸೀಲ್ದಾರ್​ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿ, ಕಳಂಕರಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸೇವೆಗಾಗಿ ಶ್ರಮಿಸುತ್ತಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್​ ಕ್ರಮ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ರಾಜ್ಯಪಾಲರ ಹುದ್ದೆಯನ್ನು ಕೇಂದ್ರ ಸರ್ಕಾರ ರಾಜಕೀಯ ದ್ವೇಷಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಕೂಡಲೇ ರಾಜ್ಯಪಾಲರು ಪ್ರಾಸಿಕ್ಯೂಷನ್​ ಅನುಮತಿ ಹಿಂಪಡೆದುಕೊಳ್ಳಬೇಕು ಇಲ್ಲದೆ ಹೋದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

ಬ್ಲಾಕ್​ ಕಾಂಗ್ರೆಸ್​ ಅಧ್ಯ ಜಿ.ಬಿ. ರಂಗನಗೌಡ್ರ, ಮುಖಂಡರಾದ ಪ್ರದಿಪ ಪಟ್ಟಣ, ಸುರೇಶ ಪತ್ತೇಪುರ, ರಮೇಶ ಅಣ್ಣಿಗೇರಿ, ಶೇಖರ ಸಿದ್ಲಿಂಗಪ್ಪನವರ, ಶಿವಯೋಗಿ ಚಿಕ್ಕೋಡಿ, ಜಹೂರ್​ ಹಾಜಿ, ರಾಜು ಮಾನೆ, ಕಷ್ಣಾ ಪಾಟೀಲ, ಅನಿಕೇತ ಪಟ್ಟಣ, ರಾಮಣ್ಣ ಬೀಡಕಿ, ಅಪ್ಪು ದಿಂಡಿವಾರ, ರಾಜಶೇಖರ ತೋಳಗಟ್ಟಿ, ಹಜರತ್​ ಪೆಲವಾನ, ಸಂಗೀತಾ ರಾಯಬಾಗ, ಚಂದ್ರು ಹಕಾಟಿ, ಪೀರು ತಳವಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net