ಸಿದ್ದಾಪುರ: ತಾಲೂಕಿನಾದ್ಯಂತ ಭಾನುವಾರ ಸಂಜೆ ಒಂದು ತಾಸು ಭರ್ಜರಿ ಮಳೆಯಾಗಿದೆ. ಇದರಿಂದ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಬಿದ್ರಕಾನ ಸಮೀಪ ವಿದ್ಯುತ್ ತಂತಿಯ ಮೇಲೆ ಮರ ಬಿದ್ದಿದ್ದು ಅದನ್ನು ಹೆಸ್ಕಾಂ ಸಿಬ್ಬಂದಿ ತೆರವುಗೊಳಿಸಿ ವಿದ್ಯುತ್ ಸಂಪರ್ಕ ನೀಡಿದ್ದಾರೆ.