ಸಿದ್ದು ಜನ್ಮ ದಿನಾಚರಣೆ ಸ್ಥಳಕ್ಕೆ ಶಾಸಕ ಶಾಮನೂರು ಭೇಟಿ

IMG-20220721-WA0071.jpg
Published on

ದಾವಣಗೆರೆ : ದಾವಣಗೆರೆಯಲ್ಲಿ ಆ. 3 ರಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಮಾರಂಭ ನಡೆಯಲಿರುವ ಬೈಪಾಸ್ ರಸ್ತೆಯ ಶಾಮನೂರು ಅರಮನೆ ಮೈದಾನಕ್ಕೆ ಗುರುವಾರ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ. ವೇಣುಗೋಪಾಲ, ಉದ್ಯಮಿ ಅಥಣಿ ವೀರಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್. ಮಲ್ಲಿಕಾರ್ಜುನ, ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್, ಸದಸ್ಯ ಎ. ನಾಗರಾಜ್, ಮುಖಂಡರಾದ ಇಟ್ಟಿಗುಡಿ ಮಂಜುನಾಥ್, ಉಮಾಶಂಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net