ಸಿದ್ಧಾಂತ ಮೆಚ್ಚಿ ಬರುವವರಿಗೆ ಪಕ್ಷಕ್ಕೆ ಸ್ವಾಗತ

ravanduru venkatesh
Published on

ರಾವಂದೂರು: ಪಕ್ಷ ಸಿದ್ಧಾಂತವನ್ನು ಮೆಚ್ಚಿ ಬರುವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡಲಾಗುವುದು ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಿರಿಯಾಪಟ್ಟಣ ತಾಲೂಕಿನ ಮರದೂರು ಗ್ರಾಮದ ತಮ್ಮ ನಿವಾಸದಲ್ಲಿ ಜೆಡಿಎಸ್ ಪಕ್ಷ ತೊರೆದು ತಾಲೂಕಿನ ಮುದ್ದನಹಳ್ಳಿ ಗ್ರಾಮದ ಆರ್.ಲೋಕೇಶ್ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಾನು ಎಂದೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಯಾವುದೇ ಪಕ್ಷದ ಕಾರ್ಯಕರ್ತರು ಬಂದರೂ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಪರಿಹಾರ ನೀಡುತ್ತೇನೆ. ನನ್ನ ಏಕೈಕ ದೃಷ್ಟಿ ತಾಲೂಕಿನ ಅಭಿವೃದ್ಧಿ ಕಡೆಗೆ ಎಂದು ಹೇಳಿದರು.

ಮುದ್ದನಹಳ್ಳಿ ಗ್ರಾಮದ ಆರ್.ಲೋಕೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉತ್ತಮ ಆಡಳಿತದಿಂದ ಶ್ರೀಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಕಾರ್ಯಕರ್ತರೆಲ್ಲರಿಗೂ ಅವಕಾಶ ಕಲ್ಪಿಸುವ ನಾಯಕ ಕೆ.ವೆಂಕಟೇಶ್ ಅವರ ಅಭಿವೃದ್ಧಿ ಕೆಲಸಗಳಿಂದ ಪ್ರೇರಣೆಗೊಂಡು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.

ಜವನಿ ಕುಪ್ಪೆ ಗ್ರಾಮದ ಶಿವರಾಜೇಗೌಡ ಹಾಗೂ ಕೃಷ್ಣೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಆಶ್ರಯ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಬಿ.ಜೆ.ಬಸವರಾಜ್, ಮೈಮುಲ್ ನಿರ್ದೇಶಕ ಪ್ರಕಾಶ್, ಲಕ್ಷ್ಮಣ ಗೌಡ, ರಫೀಕ್, ಗೋವಿಂದೇಗೌಡ, ಮಹಾದೇವ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net