ಸಿನಿಮೀಯ ರೀತಿಯಲ್ಲಿ ಬಾಲಕನ ಅಪಹರಣ -ಸಿಸಿ ಕ್ಯಾಮರಾದಲ್ಲಿ ಸೆರೆ

Published on

ಭಟ್ಕಳ: ಪಟ್ಟಣದ ಆಜಾದ್ ನಗರದಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಸಿನಿಮೀಯ ರೀತಿಯಲ್ಲಿ ಅಪಹರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಆಜಾದ ನಗರದ ನಿವಾಸಿ ಎಂಟು ವರ್ಷದ ಬಾಲಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ್ದಾರೆ‌. ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಬಾಲಕ ಮನೆಗೆ ಮರಳದೇ ನಾಪತ್ತೆಯಾಗಿದ್ದ.

ಆಜಾದ್ ನಗರದ ಮನೆಗಳ ಜನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾತ್ರಿ 8 ಗಂಟೆ ಸುಮಾರಿಗೆ ಮಾರುತಿ ಇಕೋ ವ್ಯಾನ್ ಬರುತ್ತಿರುವುದು ಕಂಡು ಬಂದಿದ್ದು,ಅದರಲ್ಲಿದ್ದ ವ್ಯಕ್ತಿಯೊಬ್ಬರು ಇಳಿದು ಬಾಲಕನನ್ನು ಎತ್ತಿಕೊಂಡು ಕಾರಿನಲ್ಲಿ ಹಾಕಿದ್ದು,ಬಳಿಕ ವಾಹನ ಪರಾರಿಯಾಗಿರುವುದು ಸೆರೆಯಾಗಿದೆ. ಆಜಾದ್ ನಗರ ಮೊದಲ ಕ್ರಾಸ್ ಜಾಲಿ ರಸ್ತೆ ಕಡೆಗೆ.ಹೋಗುತ್ತಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಗರದಾದ್ಯಂತ ಆತಂಕದ ಅಲೆ ಹಬ್ಬಿದೆ. ಪೊಲೀಸರು ಕೂಡಲೇ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರದ ವಿವಿಧೆಡೆ ಪೊಲೀಸರನ್ನು ನಿಯೋಜಿಸಿ ತನಿಖೆ ನಡೆಸಲಾಗುತ್ತಿದೆ. ಶನಿವಾರ ಸಾಯಂಕಾಲ ಐದು ಗಂಟೆಯಿಂದ ಇದೇ ಪ್ರದೇಶದಲ್ಲಿ ವಾಹನ ಸುತ್ತುತ್ತಿರುವುದು ಕಂಡು ಬಂದಿದ್ದು ಅಪಹರಣದ ವೇಳೆ ವ್ಯಾನ್ ಹಿಂದೆ ದ್ವಿಚಕ್ರ ವಾಹನವೂ ಕಾಣಿಸಿಕೊಂಡಿದೆ.ಪೊಲೀಸರು ಇತರ ಮನೆಗಳ ಹೊರಗಿನ ಸಿಸಿಟಿವಿ ದೃಶ್ಯಗಳನ್ನು ಸಹ ಪಡೆದುಕೊಂಡಿದ್ದು, ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಂತರ,ಹುಡುಗನ ಮನೆಯ ಹೊರಗೆ ಬಹಳಷ್ಟು ಜನರು ಜಮಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net