

ಸಿರಗುಪ್ಪ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ನಗರದಲ್ಲಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಅಕ್ಷರ ದಾಸೋಹ ನೌಕರರ ಸಂಘ, ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ, ನೇತಾಜಿ ಸುಭಾಷ್‌ಚಂದ್ರ ಬೋಸ್ ಫಾರ್ವಡ್ ಬ್ಲಾಕ್, ಪೀಟರ್ ಸಂಘಟನೆ, ಸಿಐಟಿಯುದಿಂದ ಮಾನವ ಸರಪಳಿ ನಿರ್ಮಿಸಲಾಯಿತು. ಬಳಿಕ ಉಪ ತಹಸೀಲ್ದಾರ್ ಸಿದ್ದಾರ್ಥ ಕಾರಂಜ, ತಾಪಂ ವ್ಯವಸ್ಥಾಪಕಿ ಸುಜಾತ ಕೋರಿ, ಸಿಡಿಪಿಒ ಇಲಾಖೆಯ ಮೇಲ್ವಿಚಾರಕಿ ಮುನಿಕರುಣಗೆ ಮನವಿ ಸಲ್ಲಿಸಲಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಹಮಾಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್.ತಿಪ್ಪಯ್ಯ, ತಾಲೂಕು ಅಧ್ಯಕ್ಷ ಎಚ್.ಬಿ.ಓಬಳೇಶಪ್ಪ, ಕಾರ್ಯದರ್ಶಿ ಸುರೇಶ, ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದುರಗಮ್ಮ, ಗೌರವ ಅಧ್ಯಕ್ಷ ಲತೀಫ್ ಖಾಜಾ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಿ.ಉಮಾದೇವಿ, ತಾಲೂಕು ಖಜಾಂಚಿ ಖಾಜಾಬಿ, ಉಪಾಧ್ಯಕ್ಷೆ ಕೆ.ನೀಲಾವತಿ, ಗ್ರಾಪಂ ನೌಕರರ ಸಂಘದ ತಾಲೂಕು ಅಧ್ಯಕ್ಷ ಸುಬ್ಬರೆಡ್ಡಿ, ನೇತಾಜಿ ಸುಭಾಷ್‌ಚಂದ್ರ ಬೋಸ್ ಫಾರ್ವರ್ಡ್ ಬ್ಲಾಕ್ ತಾಲೂಕು ಅಧ್ಯಕ್ಷ ವೀರೇಶಪ್ಪ ಇದ್ದರು.