ಸಿರಿಧಾನ್ಯಗಳಿಂದ ಉತ್ತಮ ಆರೋಗ್ಯ

13 vikram 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಿರಿಧಾನ್ಯಗಳ ಸೇವನೆಯಿಂದ ರೋಗಗಳ ನಿಯಂತ್ರಣ ಸಾಧ್ಯ ಎಂದು ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆ ಕಚೇರಿ ಅಧ್ಯಕ್ಷ ಶಿವಲಿಂಗ ನೀಲಗುಂದ ತಿಳಿಸಿದರು.
ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎಸ್.ಎಂ. ಬಮ್ಮನಗೌಡರ ಮಾತನಾಡಿ, ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿಸುವುದಲ್ಲದೇ ಮನಶಾಂತಿ ಹೆಚ್ಚಲಿದೆ. ನಮ್ಮ ಹಿರಿಯರು ಇಂತಹ ಆಹಾರ ಸೇವನೆ ಮೂಲಕವೇ ಆರೋಗ್ಯ ಕಾಪಾಡಿಕೊಂಡಿದ್ದರು. ನಾವೂ ಸಹ ಜಂಕ್ ಫುಡ್‌ಗಳನ್ನು ಬಿಟ್ಟು ಸಿರಿಧಾನ್ಯಗಳ ಸೇವನೆಗೆ ಆದ್ಯತೆ ನೀಡಬೇಕು ಎಂದರು.
ಶಿವಾನಂದ ಹೂಗಾರ ಮಾತನಾಡಿ, ವಿದ್ಯಾರ್ಥಿಗಳಿಗೆ ಸಸ್ಯಾಹಾರ ಮತ್ತು ಸಿರಿಧಾನ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಅವುಗಳನ್ನು ತಪ್ಪದೇ ಉಪಯೋಗಿಸುವಂತೆ ಸಲಹೆ ನೀಡಿದರು.
ಪಾಲಿಕೆ ಮಾಜಿ ಸದಸ್ಯ ಆನಂದ ಸಿಂಗನಾಥ, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಮಹಾದೇವ ಹೊಸಮನಿ, ದೇವೇಂದ್ರ ಹೊಂಬಳ, ರೇಣುಕಾ ವಾಕೋಡೆ, ಸ್ಫೂರ್ತಿ ಹಿರೇಮಠ, ಚೈತ್ರಾ ಸಂಗೊಳ್ಳಿ, ವಿದ್ಯಾರ್ಥಿಗಳು, ಇತರರು ಇದ್ದರು.
ಮಕ್ಕಳು ತಂದಿದ್ದ ಸಿರಿಧಾನ್ಯಗಳನ್ನು ಶಾಲಾ ಆವರಣದಲ್ಲಿ ಪ್ರದರ್ಶಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net