

ಹಾಸನ.ಜು.26(ಕರ್ನಾಟಕ ವಾರ್ತೆ):- ಜಿಲ್ಲೆಯ ಎಲ್ಲಾ ಗ್ರಾಹಕರ ಗಮನಕ್ಕೆ ತರಬಯಸುವುದೇನೆಂದರೆ, ಜುಲೈ-2024 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ ಎಂದು ತಿಳಿಸಿದ್ದಾರೆ.
ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಸನ ಕಾರ್ಯಾಲಯಕ್ಕೆ ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.