ಸಿಲಿಂಡರ್ ಲಾರಿ ಪಲ್ಟಿ ತಪ್ಪಿದ ಭಾರಿ ಅನಾಹುತ

lpg-agencoes-3-1200x675
Published on

ಚಿತ್ರದುರ್ಗ: ಅಡುಗೆ ಅನಿಲ (ಸಿಲಿಂಡರ್) ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಬಹದ್ದೂರ್‌ಘಟ್ಟ ಗ್ರಾಮದ ಸಮೀಪ ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಹತ್ತಿಕೊಳ್ಳದಂತೆ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದರು. ತಿಪಟೂರು ಮೂಲದ ಲಾರಿ ಚಾಲಕ ರುದ್ರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net