ಮೈಸೂರು: ನಿಯಮ ಬಾಹಿರವಾಗಿ ಕಾರ್ಮಿಕರನ್ನು ಕೆಲಸದಿಂದ ಅಮಾನತು ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಪುರಭವನದ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದಕ್ಕೆ 39 ಕಾರ್ಮಿಕರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಈ ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಕಾರ್ಮಿಕರ ಅಮಾನತನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
--