ಸಿಸಿ ಕ್ಯಾಮೆರಾದಲ್ಲಿ ಚಿರತೆ ಸೆರೆ

tnpnews01.
ತಿ.ನರಸೀಪುರ ತಾಲೂಕಿನ ಮದ್ಗಾರ ಲಿಂಗಯ್ಯನ ಹುಂಡಿ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ಸಿಸಿ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗಿರುವುದು.
Published on

ತಿ.ನರಸೀಪುರ: ತಾಲೂಕಿನ ಎಂ.ಎಲ್.ಗ್ರಾಮದ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ತಪ್ಪಲಿನ ವಿರಕ್ತಮಠದ ಆವರಣದಲ್ಲಿ ಶನಿವಾರ ಬೆಳಗಿನ ಜಾವ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಮಠದ ಭಕ್ತರು ಹಾಗೂ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ.

ಕಳೆದ ಮೂರು ವರ್ಷಗಳಿಂದ ಮಠದ ಆಸುಪಾಸಿನಲ್ಲಿ ಚಿರತೆಗಳ ಹಾವಳಿ ಹೆಚ್ಚಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಮರಗಳ್ಳರ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಭಯ ಹುಟ್ಟಿಸುವ ಸಲುವಾಗಿ ಮೂರು ವರ್ಷಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಮರಿಯೊಂದನ್ನು ತಂದು ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದರು ಎನ್ನಲಾಗಿದೆ. ಆದರೆ ಈಗ ಅವುಗಳ ಸಂತತಿ ಹೆಚ್ಚಾಗಿ ಗ್ರಾಮಸ್ಥರು ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಸಂಚರಿಸುತ್ತಿರುವ ಚಿರತೆಗಳು ಹಾಡಹಗಲೇ ಮೇಕೆ, ಹಸುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿವೆ. ಇತ್ತೀಚೆಗಷ್ಟೇ ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ. ಗ್ರಾಮದ ಆಸು ಪಾಸಿನಲ್ಲಿ ಇಟ್ಟಿಗೆ ಫ್ಯಾಕ್ಟರಿಗಳಿದ್ದು, ಬೆಳಗಿನ ಜಾವ 5 ಗಂಟೆಗೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು ಜೀವ ಕೈಯಲ್ಲಿಡಿದು ತೆರಳಬೇಕಿದೆ.

ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಬೋನುಗಳನ್ನು ಅಳವಡಿಸಿದ್ದರೂ ಕಾರ್ಯಾಚರಣೆ ಯಶಸ್ವಿಯಾಗಿಲ್ಲ. ಇದರಿಂದ ಮತ್ತಷ್ಟು ಭೀತಿ ಎದುರಾಗಿದ್ದು, ಅರಣ್ಯ ಇಲಾಖೆಯವರು ಹೆಚ್ಚಿನ ಕಾರ್ಯಾಚರಣೆಯೊಂದಿಗೆ ಚಿರತೆಗಳನ್ನು ಸೆರೆಹಿಡಿದು ಗ್ರಾಮಸ್ಥರಲ್ಲಿರುವ ಭೀತ್ನಿ ಹೋಗಲಾಡಿಸಬೇಕೆಂದು ವಿರಕ್ತ ಮಠದ ಶ್ರೀ ಗೌರಿ ಶಂಕರ ಸ್ವಾಮೀಜಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net