ಸಿಸಿ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

25rajesh4
Published on

ಚಾಮರಾಜನಗರ: ತಾಲೂಕಿನ ಹೆಬ್ಬಸೂರು ಸಮೀಪದ ಅರಳೀಪುರ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.

ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ ಎಸ್‌ಇಪಿ ಯೋಜನೆಯಡಿ ಅಂದಾಜು 50 ಲಕ್ಷ ರೂ, ಅನುದಾನದ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಚಾ.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಗ್ರಾಮ ಮಪಂಚಾಯಿತಿ ಅಧ್ಯಕ್ಷೆ ಪದ್ಮಾ, ಸದಸ್ಯೆ ವಸಂತಿ, ಗ್ರಾ.ಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡ ಹೆಬ್ಬಸೂರು ವೀರಭದ್ರಸ್ವಾಮಿ, ರಂಗಸ್ವಾಮಿ, ನಿರ್ಮಿತಿ ಕೇಂದ್ರದ ಎಂಜಿನಿಯರ್ ಬೀಮ್ ಸಾಗರ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net