ಸಿಸಿಬಿ ಪೊಲೀಸರಿಂದ 1.1 ಕೆಜಿ ಗಾಂಜಾ, 126 ಗ್ರಾಂ ಚರಸ್ ವಶ

Crime Logo
Published on

ಮೈಸೂರು: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ನಗರದ ಸಿಸಿಬಿ ಪೊಲೀಸರು 1.1 ಕೆಜಿ ಗಾಂಜಾ ಮತ್ತು 126 ಗ್ರಾಂ ಚರಸ್ ವಶಪಡಿಸಿಕೊಂಡಿದ್ದಾರೆ.
ಪ್ರಕರಣ-1: ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಸೋಮವಾರ ನಗರದ ತಿ.ನರಸೀಪುರ ಮುಖ್ಯರಸ್ತೆಯ ಆಲನಹಳ್ಳಿ ಕೆರೆಗೆ ಹೊಂದಿಕೊಂಡಂತೆ ಇರುವ ಅರಳಿಮರದ ಬಳಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಅಂದಾಜು 3.50 ಲಕ್ಷ ರೂ. ಮೌಲ್ಯದ ಚರಸ್, ತೂಕದ ಯಂತ್ರ, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸದರಿ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಕರಣ-2: ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಡಿ.15 ರಂದು ನಗರ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್‌ನಗರ 2ನೇ ಹಂತ, ಸೈಯದ್ ಅಬ್ದುಲ್ ರೆಹಮಾನ್ ರಸ್ತೆಯಲ್ಲಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಅಂದಾಜು 70 ಸಾವಿರ ರೂ. ಮೌಲ್ಯದ 1.1 ಕೆಜಿ ಗಾಂಜಾ, ತೂಕದ ಯಂತ್ರ, 1,850 ರೂ. ನಗದು, ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸದರಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net